ಅನಾರೋಗ್ಯದಿಂದ ಹಾಸ್ಯ ನಟ ಬುಲೆಟ್ ದಿಲೀಪ್ ಪ್ರಕಾಶ್ ವಿಧಿವಶ…!

ಅನಾರೋಗ್ಯದಿಂದ  ಹಾಸ್ಯ ನಟ ಬುಲೆಟ್ ಪ್ರಕಾಶ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ನಮ್ಮನ್ನ ಅಗಲಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬುಲೆಟ್ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ತಿಂಗಳಿಂದ ಆರೋಗ್ಯದಲ್ಲಿ ಏರುಪೇರು ಆಗಿದ್ದು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಬುಲೆಟ್ ಪ್ರಕಾಶ್ ಅವರು ಕಿಡ್ನಿ ವೈಫಲ್ಯ ಮತ್ತು ಸೋಂಕಿನಿಂದ ಬಳಲುತ್ತಿದ್ದರು. ಅವರಿಗೆ ಡಯಾಲಿಸ್ ಮಾಡಲಾಗುತ್ತಿತ್ತು. ಆದರೆ ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ನಗರ ಪೋರ್ಟೀಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ನಟ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

1976 ಏಪ್ರಿಲ್ 2ರಂದು ಜನಿಸಿದ್ದ ಬುಲೆಟ್ ಪ್ರಕಾಶ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಸಂಜೆ 4.45 ಸುಮಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. 325 ಸಿನಿಮಾಗಳಲ್ಲಿ ಬುಲೆಟ್ ಪ್ರಕಾಶ್ ಅಭಿನಯಿಸಿದ್ದರು. 44 ವರ್ಷದ ಬುಲೆಟ್ ಪ್ರಕಾಶ್ ಬಹುತೇಕ ಎಲ್ಲಾ ನಾಯಕ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.

ಬುಲೆಟ್ ಪ್ರಕಾಶ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಹಾಗೂ ಅಸಂಖ್ಯ ಅಭಿಮಾನಿಗಳನ್ನು ಅಗಲಿದ್ದಾರೆ. ದುನಿಯಾ ವಿಜಯ್, ದರ್ಶನ್, ಶಿವರಾಜ್ ಕುಮಾರ್ ಅವರೊಂದಿಗೆ ಆತ್ಮೀಯ ಸಂಬಂಧವನ್ನು ಬುಲೆಟ್ ಪ್ರಕಾಶ್ ಹೊಂದಿದ್ದರು.

ಇವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗೆ ಒಂದು ಸಿನಿಮಾ ಮಾಡುವ ಕನಸು ಹೊಂದಿದ್ದರಂತೆ ಆದರೆ ಕನಸು ನನಸಾಗಿಯೇ ಉಳಿದಿದ್ದು ಹ್ಯಾಸ ನಟನನ್ನು ಕಳೆದುಕೊಂಡ ಸ್ಯಾಂಡಲ್ ವುಡ್ ಕಂಬನಿ ಮಿಡಿದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights