ಆಟೋ, ಟ್ಯಾಕ್ಸಿ ಚಾಲಕರಿಗೆ ಕೊರೊನಾ ಪರಿಹಾರ : ಸೇವಾಸಿಂಧು ಮೂಲಕ ಅರ್ಜಿಗೆ ಆಹ್ವಾನ

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ ಚಾಲಕರು ಮುಖ್ಯಮಂತ್ರಿಗಳು ಘೋಷಿಸಿರುವ ಪರಿಹಾರ ಹಣ ಸ್ವೀಕರಿಸಲು ಸೇವಾಸಿಂಧು ಪೋರ್ಟಲ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು.

ಹೌದು… ಕೊರೊನಾ ಲಾಕ್ ಡೌನ್ ಪರಿಣಾಮ ಸಂಕಷ್ಟದಲ್ಲಿರುವ ಆಟೋ/ಟ್ಯಾಕ್ಸಿ ಚಾಲಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೇ 6ರಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದರಿಂದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 5000 ಪರಿಹಾರ ಧನವನ್ನು ಸರ್ಕಾರ ನೀಡುತ್ತದೆ. ಆದರೆ ಇದನ್ನು ಹೇಗೆ ಪಡೆದುಕೊಳ್ಳಬೇಕು ಎಂಬ ಗೊಂದಲ ಚಾಲಕರಲ್ಲಿದೆ.

ರಾಜ್ಯದಲ್ಲಿರುವ 7,75,000 ಆಟೋ ಹಾಗೂ ಟ್ಯಾಕ್ಸಿ ಚಾಲಕರು  ಪರಿಹಾರ ಧನವನ್ನು ಪಡೆಯಲು ಅಂಚೆ ಕಚೇರಿಗಳ ಎದುರಿಗೆ ಸರತಿ ಸಾಲಿನಲ್ಲಿ ನಿಂತು ಅರ್ಜಿಗಳನ್ನು ಕಳುಹಿಸಲು ಪ್ರಯತ್ನಿಸುತ್ತಿರುವುದರಿಂದ ಸಾಮಾಜಿಕ ಅಂತರ ಹಾಗೂ ಕೊರೊನಾ ಹರಡುವ ಸಾಧ್ಯತೆಯನ್ನು ಅರಿತ ಸಾರಿಗೆ ಆಯುಕ್ತರು ಆಟೋ/ಟ್ಯಾಕ್ಸಿ ಚಾಲಕರಿಗೆ ಸೂಚನೆಯನ್ನು ನೀಡಿದ್ದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಅರ್ಹ ಚಾಲಕರು ಸರ್ಕಾರದ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್‌ ಮೂಲಕ ಸಲ್ಲಿಸುವಂತೆ ಹಾಗೂ ಅದನ್ನು ಸ್ಪೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪರಿಹಾರ ಧನ ನೀಡಲು ಅರ್ಜಿಗಳನ್ನು ಆನ್‌ಲೈನ್‌ಗಳಲ್ಲಿ ಸೇವಾಸಿಂಧು ಪೋರ್ಟಲ್‌ಗಳ ಮೂಲಕ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಆದ್ದರಿಂದ ಆಟೋ ರಿಕ್ಷಾ ಚಾಲಕರು ಅರ್ಜಿಗಳನ್ನು ಸಲ್ಲಿಸಲು ಅನವಶ್ಯಕವಾಗಿ ಪರಿಶ್ರಮ ಪಡುವ ಅಗತ್ಯವಿಲ್ಲ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನವನ್ನು ಅವರ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಆದ್ದರಿಂದ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.