ಆಪರೇಷನ್‌ ರಂಗ್‌ಪಂಚಮಿಗೆ ಬಲಿಯಾಗುವುದೇ ಮಧ್ಯಪ್ರದೇಶದ ಕಾಂಗ್ರೆಸ್‌ ಸರ್ಕಾರ 

ದೆಹಲಿಯ ಪ್ರಧಾನಿ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ನಂತರ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್‌ ಪಕ್ಷದಿಂದ ನಾಲ್ಕು ಬಾರಿ ಸಂಸದರಾಗಿದ್ದ ಜ್ಯೋತಿರದಿತ್ಯ ಸಿಂಧಿಯಾ ಅವರು ಇಂದು ಬೆಳಿಗ್ಗೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.

ಜ್ಯೋತಿರಾಧಿತ್ಯ ಸಿಂಧಿಯಾ ಮಾರ್ಚ್ 09 ರಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರನ್ನು ಉದ್ದೇಶಿಸಿ ಬರೆದಿರುವ ಪತ್ರದಲ್ಲಿ “ಮೊದಲಿನಿಂದಲೂ ನನ್ನ ಗುರಿ ಮತ್ತು ಉದ್ದೇಶವು ಒಂದೇ ಆಗಿತ್ತು, ನನ್ನ ರಾಜ್ಯ ಮತ್ತು ದೇಶದ ಜನರಿಗೆ ಸೇವೆ ಸಲ್ಲಿಸುವುದು, ಈ ಪಕ್ಷದೊಳಗೆ ಇನ್ನು ಮುಂದೆ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ನಾನು ನಂಬುತ್ತೇನೆ” ಎಂದು ಬರೆದಿದ್ದಾರೆ.

ಸಿಂಧಿಯಾ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ, ಕಾಂಗ್ರೆಸ್ ಅವರನ್ನು “ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ” ಹೊರಹಾಕಲಾಗಿದೆ ಎಂದು ಪ್ರತಿಕ್ರಿಯಿಸಿದೆ. ಇಂದು ಬೆಳಿಗ್ಗೆ ಸೋನಿಯಾ ಗಾಂಧಿಯವರನ್ನು ಭೇಟಿಯಾದ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸಿಂಧಿಯಾ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

15 ತಿಂಗಳ ಕಮಲ್ ನಾಥ್ ಸರ್ಕಾರವನ್ನು ಉರುಳಿಸುವ ಈ ಡ್ರಾಮದಲ್ಲಿ 25 ಕಾಂಗ್ರೆಸ್ ಶಾಸಕರು ಮಧ್ಯಪ್ರದೇಶದ ವಿಧಾನಸಭೆಯ ಸ್ಪೀಕರ್‌ಗೆ ರಾಜೀನಾಮೆ ಪತ್ರಗಳನ್ನು ಫ್ಯಾಕ್ಸ್ ಮೂಲಕ ಸಲ್ಲಿಸಲು ಸಿದ್ಧರಾಗಿದ್ದಾರೆ. ಇದರ ಹಿಂದಿರುವ ರುವಾರಿ ಸಿಂಧಿಯಾ ಬಿಜೆಪಿಗೆ ಸೇರಬಹುದು ಮತ್ತು ಬಿಜೆಪಿಯಿಂದ ರಾಜ್ಯಸಭೆಗೆ ಸದಸ್ಯರಾಗಿ ನೇಮಕಗೊಳ್ಳಬಹುದಾದ ಸಾಧ್ಯತೆಗಳಿವೆ.

ಪಕ್ಷದ ಶಾಸಕರನ್ನು ಭೋಪಾಲ್‌ಗೆ ಕರೆಸಿಕೊಂಡಿರುವ ಬಿಜೆಪಿ, ಸಂಜೆ 6 ಗಂಟೆಗೆ ನಗರದ ಹೋಟೆಲ್‌ವೊಂದರಲ್ಲಿ ಸಭೆ ನಡೆಸಲಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಹಕ್ಕು ಪಡೆಯುವ ನಿರೀಕ್ಷೆಯಿದೆ. ಬಿಜೆಪಿಯು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

ಕಾಂಗ್ರೆಸ್ ಮುಖಂಡರಾದ ಸಚಿನ್ ಪೈಲಟ್ ಮತ್ತು ಕರಣ್ ಸಿಂಗ್ ಅವರು  ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಸಾಮರಸ್ಯದ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ರಾಜಸ್ಥಾನದ ಉಪಮುಖ್ಯಮಂತ್ರಿಯೂ ಆಗಿರುವ ಪೈಲಟ್ ಅವರು “ಪಕ್ಷದೊಳಗಿನ ಬಿಕ್ಕಟ್ಟು ಶೀಘ್ರದಲ್ಲೇ ಕೊನೆಗೊಳ್ಳುತ್ತದೆ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಪಕ್ಷದ ಮುಖಂಡರು ಸಮರ್ಥರಾಗಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಸಿಂಧಿಯಾ ಅವರನ್ನು ಕಾಂಗ್ರೆಸ್‌ನ ಮೊದಲ ಆದ್ಯತೆಯ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಕಳುಹಿಸಲು ಸೂತ್ರವೊಂದನ್ನು ರೂಪಿಸಲಾಗಿದೆ ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿಗೆ ವರದಿ ಮಾಡಿದೆ.

15 ವರ್ಷಗಳ ನಂತರ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿಗೆ ಅವರು ನೀಡಿದ ಕೊಡುಗೆಯ ಹೊರತಾಗಿಯೂ ಅವರು ಕೇವಲ 23 ಶಾಸಕರ ಬೆಂಬಲವನ್ನು ತೋರಿಸಲು ಸಾಧ್ಯವಾದ ನಂತರ 2018ರ ಡಿಸೆಂಬರ್‌ನಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅಂಗೀಕರಿಸಲಾಗಿತ್ತು.

ಒಂದು ಕಾಲದಲ್ಲಿ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದ ಸಿಂಧಿಯಾ ಅವರು ದಿನಗಳಿಂದ ಹಿರಿಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಗಸ್ಟ್‌ ತಿಂಗಳಿನಲ್ಲಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿ ಅನ್ವಯ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸುವ ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ವಿವಾದಾತ್ಮಕ ನಿರ್ಧಾರದ ಬಗ್ಗೆ ಕೇಂದ್ರವನ್ನು ಬಹಿರಂಗವಾಗಿ ಬೆಂಬಲಿಸಿದ ನಂತರ ಪಕ್ಷದ ನಾಯಕತ್ವದ ಪಟ್ಟಿಗೆ ಅಚ್ಚರಿಯ ಸೇರ್ಪಡೆಯಾಗಿದ್ದರು.

ಸೋಮವಾರ ರಾಜಕೀಯ ಡ್ರಾಮ ಪ್ರಾರಂಭವಾದಾಗಿನಿಂದ “ಕಾಂಗ್ರೆಸ್ ಪಕ್ಷವು ಸಿಂಧಿಯಾ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಅವರಿಗೆ ಹಂದಿ ಜ್ವರವಿದೆ. ಆದ್ದರಿಂದ ಅವರೊಂದಿಗೆ ಮಾತನಾಡಲು ಸಧ್ಯವಾಗಿಲ್ಲ” ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ಮಧ್ಯಪ್ರದೇಶ ವಿಧಾನಸಭೆಯ 230 ಸದಸ್ಯರ ಪೈಕಿ 116ರ ಬಹುಮತವಿರಬೇಕು. ಸರ್ಕಾರವು 120 ಶಾಸಕರನ್ನು ಹೊಂದಿದೆ. ಈ ಪೈಕಿ 114 ಶಾಸಕರು ಕಾಂಗ್ರೆಸ್ ಮೂಲದವರು, ಇಬ್ಬರು ಬಿಎಸ್ಪಿ, ಒಬ್ಬ ಸಮಾಜವಾದಿ ಪಕ್ಷ ಮತ್ತು ನಾಲ್ವರು ಸ್ವತಂತ್ರರು. ಬಿಜೆಪಿಯು 107 ಶಾಸಕರನ್ನು ಹೊಂದಿದೆ ಮತ್ತು ಪ್ರಸ್ತುತ ಎರಡು ಸ್ಥಾನಗಳು ಖಾಲಿ ಇವೆ.

ಕಳೆದ ವಾರ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸರ್ಕಾರದ 10 ಶಾಸಕರನ್ನು ಬಿಜೆಪಿಯು ದೆಹಲಿ ಬಳಿಯ ರೆಸಾರ್ಟ್‌ನಲ್ಲಿರಿಸಿತ್ತು ಎಂದು ತಿಳಿದು ಬಂದಿದೆ. ಸರ್ಕಾರ ಉರುಳಿಸುವ ಡ್ರಾಮಕ್ಕೆ “ಆಪರೇಷನ್ ರಂಗ್‌ಪಂಚಮಿ” (ಹೋಳಿ ಹಬ್ಬದ ಸಂದರ್ಭದಲ್ಲಿ ಸರ್ಕಾರ ಬೀಳಬೇಕೆಂದು ಬಿಜೆಪಿ ಬಯಸಿದೆ) ಎಂದು ಬಿಜೆಪಿ ಹೆಸರಿಟ್ಟಿದೆ ಎಂದು ಹೇಳಲಾಗಿದೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ.

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಸರ್ಕಾರ ರಚನೆ ಮಾಡಿದ್ದ ಬಿಜೆಪಿ, ಮಧ್ಯಪ್ರದೇಶದಲ್ಲಿಯೂ ರಾಜಕೀಯ ಹೈ ಡ್ರಾಮವೆಂದು ಕರೆಯಲ್ಪಡುವ ಅನೈತಿಕ ರಾಜಕೀಯ ಆರಂಭಸಿದೆ. ಬಿಜೆಪಿಯ ಕಪಟ ನಾಟಕಕ್ಕೆ ಮಧ್ಯಪ್ರದೇಶದ ಕಾಂಗ್ರೆಸ್‌ ಸರ್ಕಾರ ಉರುಳುವ ಸಾಧ್ಯತೆಗಳೇ ಹೆಚ್ಚಾಗಿವೆ.

ಲೋಕಸಭಾ ಚುನಾವಣೆಯಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡಿದ್ದ ಕಾಂಗ್ರೆಸ್‌ಗೆ ಇದು ಎರಡನೆಯ ಹೊಡೆತ ಕೊಟ್ಟಿದ್ದು, ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights