ಆರೋಗ್ಯ ಮತ್ತು ಆಶಾ ಕಾರ್ಯಕರ್ತರಿಗೆ ಸಶಸ್ತ್ರ ಭದ್ರತೆ ನೀಡಿ: ಹೈಕೋರ್ಟ್‌

ಆರೋಗ್ಯ ಮತ್ತು ಆಶಾ ಕಾರ್ಯಕರ್ತರಿಗೆ ಸಶಸ್ತ್ರ ಭದ್ರತೆ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಪಾದರಾಯನಪುರದಲ್ಲಿ ಗಲಭೆ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ಬಿ ವಿ ನಾಗರತ್ನ ಅವರನ್ನೊಳಗೊಂಡವಿಭಾಗೀಯ ಪೀಠ  ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ವೈದ್ಯರು, ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ಕ್ವಾರಂಟೈನ್ ಗೆ ಒಳಗಾಗಿರುವ ಸ್ಥಳಕ್ಕೆ ಹೋಗುವಾಗ ಅವರ ಜೊತೆ ಪೊಲೀಸರನ್ನು ಕಳುಹಿಸುವಂತೆ ಸೂಚಿಸಿದೆ. ಬೆಂಗಳೂರಿನ ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಗಲಭೆ ನಡೆದಿತ್ತು. ಬಿಬಿಎಂಪಿ, ಆರೋಗ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆಗೆ ಪ್ರಯತ್ನ ನಡೆಸಲಾಗಿತ್ತು. ಈ ಘಟನೆ ಸಂಬಂಧ
ಇದುವರೆಗೂ 119 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ವೈದ್ಯರು, ಆರೋಗ್ಯ ಮತ್ತು ಆಶಾ ಕಾರ್ಯಕರ್ತರ ಭದ್ರತೆಗೆ ಯಾವ ಮಾರ್ಗಸೂಚಿ ರೂಪಿಸಲಾಗಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಕರ್ನಾಟಕ ಹೈಕೋರ್ಟ್‌ ಸರ್ಕಾರಕ್ಕೆ ಸೂಚಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights