ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ವಜುಬಾಯಿ ವಾಲಾ ಡಿಸ್ಚಾರ್ಜ್…

ಆನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯಪಾಲ ವಜುಬಾಯಿ ವಾಲಾ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನ.24ರಂದು ಬನ್ನೇರುಘಟ್ಟದ ಫೋರ್ಟಿಸ್​ ಆಸ್ಪತ್ರೆಗೆ ದಾಖಲಾಗಿದ್ದ ಅವರು ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ನ.25ರಂದು ಆಸ್ಪತ್ರೆಯ ಕಾರ್ಡಿಯಾ ವಾಸ್ಕ್ಯುಲರ್​ ಸರ್ಜನ್​ ಡಾ ವಿವೇಕ್​ ಜವಲಿ ಅವರಿಗೆ ಸರ್ಜರಿ ನಡೆಸಿದ್ದರು, ಇದಾದ ಬಳಿಕ ಐದು ದಿನಗಳ ಕಾಲ ಅವರನ್ನು ಗಮನಿಸಲಾಗುತ್ತಿತ್ತು, ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಇಂದು ಬೆಳಗ್ಗೆ ಡಿಸ್ಚಾರ್ಜ್​ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights