ಆಸ್ಪತ್ರೆಯ ಎಂಟನೇ ಮಹಡಿಯಿಂದ ಹಾರಿದ ವೈದ್ಯ…!

ನವದೆಹಲಿಯ ಜಿಟಿಬಿ ಆಸ್ಪತ್ರೆಯ ಎಂಟನೇ ಮಹಡಿಯಿಂದ ಹಾರಿ ಪಲ್ಲವ್ ಎಂಬ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿಸಿರುವ ಪೊಲೀಸರು, ಅಸ್ಸಾಂ ಮೂಲದ ಈ ವೈದ್ಯ ಆಸ್ಪತ್ರೆಯ ಕ್ಯಾಂಪಸ್ ನಲ್ಲಿ ಪತ್ನಿಯ ಜತೆ ವಾಸವಾಗಿದ್ದರು.

ಎಂಟನೇ ಮಹಡಿಯಿಂದ ಹಾರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಅದೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದೂ ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights