ಏ.30ರವರೆಗೂ ಲಾಕ್ ಡೌನ್ ವಿಸ್ತರಣೆ : ತೆರವುಗೊಳ್ಳುತ್ತಾ ದೇಶದ 400 ಜಿಲ್ಲೆಗಳು?

ರಾಜ್ಯದಲ್ಲಿ ಏ.30ರ ವರೆಗೂ ಲಾಕ್ ಡೌನ್ ಮುಂದುವರೆಯುವುದು ಬಹುತೇಕ ಖಚಿತಗೊಂಡಿದೆ. ಆದರೆ ರಾಜ್ಯದಲ್ಲಿ ಕೆಲವು ಷರತ್ತುಗಳನ್ನು ಅನ್ವಯಿಸಿ ಕೆಲವು ಜಿಲ್ಲೆಗಳನ್ನು ಸಡಿಲಗೊಳಿಸುವ ಸಾಧ್ಯತೆ ಇದೆ.

ಹೌದು… ನಿನ್ನೆಯಷ್ಟೇ ದೇಶದ ಪ್ರಧಾನಿಯವರು ಕೊರೊನಾ ಲಾಕ್ ಡೌನ್ ಕುರಿತಾಗಿ ಎಲ್ಲಾ ಸಿಎಂಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ಮಾಡಿದ್ದಾರೆ. ಈ ವೇಳೆ ಲಾಕ್ ಡೌನ್ ಮುಂದುವರೆಸುವಂತೆ ಬಹುತೇಕ ಸಿಎಂಗಳು ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ. ಈ ಪ್ರಕಾರವಾಗಿ ಎರಡನೇ ಹಂತದ ಲಾಕ್ ಡೌನ್ ರಾಜ್ಯದಲ್ಲಿ ಆರಂಭಿಸಲಾಗುತ್ತದೆ.

ಅಲ್ಲದೇ ದೇಶದಲ್ಲಿ ಒಡಿಶಾ, ಪಂಜಾಬ್, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳು ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿವೆ.

2ನೇ ಹಂತದ ಲಾಕ್ ಡೌನ್‌ನಲ್ಲಿ ಕೇಂದ್ರ ಸರ್ಕಾರ 3 ವಿಭಾಗ ಮಾಡಲಿದೆ. ಕೆಂಪು, ಹಳದಿ ಮತ್ತು ಹಸಿರು ಎಂದು ಪ್ರದೇಶಗಳನ್ನು ವಿಭಾಗ ಮಾಡಲಾಗುತ್ತದೆ. ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾದ ಜಿಲ್ಲೆಗಳು ಕೆಂಪು ಪಟ್ಟಿಗೆ ಸೇರಲಿವೆ.

ಹಳದಿ ವಿಭಾಗದಲ್ಲಿ ಕಡಿಮೆ ಸಂಖ್ಯೆಯ ಕೊರೊನಾ ಸೋಂಕಿತ ಪ್ರಕರಣ ದಾಖಲಾದ ಜಿಲ್ಲೆ ಸೇರಲಿದೆ. ಇಲ್ಲಿ ಲಾಕ್ ಡೌನ್ ನಿಯಮ ಸಡಿಲವಾಗಲಿದೆ. ಆದರೆ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕನ ಮಾಡಲಾಗುತ್ತದೆ. ಯಾವುದೇ ಕೊರೊನಾ ಪ್ರಕರಣಗಳು ದಾಖಲಾಗದ ಜಿಲ್ಲೆಗಳನ್ನು ಹಸಿರು ವಿಭಾಗಕ್ಕೆ ಸೇರಿಸಲಾಗುತ್ತದೆ. ಇಲ್ಲಿ ಸಾಮಾನ್ಯ ಜನಜೀವನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮಾರ್ಗಸೂಚಿಸ ಸಿದ್ಧಮಾಡಲಾಗಿದೆ. ಆದರೆ, ಬೇರೆ ಜಿಲ್ಲೆಗಳ ಜನರು ಈ ಜಿಲ್ಲೆಗೆ ಪ್ರವೇಶ ಮಾಡದಂತೆ ನಿರ್ಬಂಧ ಹೇರಲಾಗುತ್ತದೆ. ವರದಿಗಳ ಪ್ರಕಾರ ದೇಶದ 400 ಜಿಲ್ಲೆಗಳಲ್ಲಿ ಯಾವುದೇ ಕೊರೊನಾ ಪ್ರಕರಣಗಳು ದಾಖಲಾಗಿಲ್ಲ. ಈ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಂಪೂರ್ಣ ತೆರವುಗೊಳಿಸುವ ನಿರೀಕ್ಷೆ ಇದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights