ಕಲಬುರಗಿಯ ಓರ್ವ ವೃದ್ಧ ಕೊರೊನಾದಿಂದ ಬಲಿ – ರಾಜ್ಯದಲ್ಲಿ ಸಾವಿನ ಸಂಖ್ಯೆ 17ಕ್ಕೇರಿಕೆ!
ಕೋವಿಡ್-19ಗೆ ರಾಜ್ಯವೇ ತತ್ತರಿಸಿ ಹೋಗಿದ್ದು, ದಿನದಿಂದ ದಿನಕ್ಕೆ ಸೋಂಂಕಿತರ ಸಂಖ್ಯೆ ಜೊತೆಗೆ ಸಾವು ನೋವುಗಳು ಸಂಭವಿಸುತ್ತಿದ್ದು ಕಲಬುರಗಿಯಲ್ಲಿ ಓರ್ವ ವೃದ್ಧ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.
ಹೌದು… ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.
ಕಲಬುರಗಿಯಲ್ಲಿ 80 ವರ್ಷದ ವೃದ್ಧರೊಬ್ಬರು ಕೊರೊನಾ ವೈರಸ್ ಗೆ ನಿನ್ನೆ ರಾತ್ರಿ 9 ಗಂಟೆಗೆ ಸಾವನ್ನಪ್ಪಿದ್ದಾರೆ. ಈ ವೃದ್ಧನಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಸಚಿವ ಡಾ.ಕೆ. ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ.ಇನ್ನು ಕಲಬುರಗಿಯಲ್ಲಿ 80 ವರ್ಷದ ವೃದ್ಧ ಸಾವನ್ನಪ್ಪುವ ಮೂಲಕ ಕಲಬುರಗಿಯಲ್ಲಿ ಕಿಲ್ಲರ್ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.
https://twitter.com/mla_sudhakar/status/1252424010446454790

