ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು : ಮೃತದೇಹ ಪತ್ತೆ..!
ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರಿನ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ.
ರವಿ (40) ವರ್ಷ ಕಾಲು ಜಾರಿ ಕೆರೆಗೆ ಬಿದ್ದು ಸಾವು ಕಂಡಿರುವ ವ್ಯಕ್ತಿ. ಹೊಲಕ್ಕೆ ಹೋಗುವ ದಾರಿಯಲ್ಲಿ ಇರುವ ಕೊಪ್ಪದಕೆರೆಗೆ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದ ರವಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಹೊಳೆಹೊನ್ನೂರು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಸ್ಥರ ಾಕ್ರಂದನ ಮುಗಿಲು ಮುಟ್ಟಿದೆ.