ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದವನು ವಾಪಸ್ಸು ಬರಲೇ ಇಲ್ಲ….!

ಬಟ್ಟೆ ತೊಳೆಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಇಬ್ಬರ ಮೃತದೇಹಗಳನ್ನು ಸತತ ಐದು ಗಂಟೆಗಳ ಕಾರ್ಯಚರಣೆ ಮೂಲಕ ಹೊರ ತೆಗೆಯಲಾಗಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತೆರಾಲು ಗ್ರಾಮದ ಕೆರೆಯಲ್ಲಿ ನಿನ್ನೆ ಸಂಜೆ ಪುಟ್ಟ ಎಂಬುವರು ಬಟ್ಟೆ ತೊಳೆಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದರು. ಈ ವೇಳೆ ಸ್ನೇಹಿತ ವಿನೋದ್ ಪುಟ್ಟನನ್ನು ರಕ್ಷಿಸಲು ಹೋಗಿ ಅವರು ಮುಳುಗಿ ಮೃತಪಟ್ಟಿದ್ದರು. ಆದ್ರೆ ನಿನ್ನೆ ಕತ್ತಲು ಆಗಿದ್ದರಿಂದ ಮೃತದೇಹಗಳನ್ನು ತೆಗೆಯಲು ಸಾಧ್ಯವಾಗಿರಲಿಲ್ಲ.

ಇಂದು ಬೆಳಗ್ಗೆಯಿಂದ ಶ್ರೀಮಂಗಲ ಪೊಲೀಸ್ರು ಸ್ಥಳೀಯ ಮುಳುಗು ತಜ್ಞ ಮಾರಿಮುತ್ತು ಅವರ ಸಹಾಯದಿಂದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಮೃತರು ತೆರಾಲು ಗ್ರಾಮದ ಪೊನ್ನಪ್ಪ ಎಂಬುವವರ ತೋಟ ಕಾರ್ಮಿಕರಾಗಿದ್ದು ಲೈನ್ ಮನೆಯಲ್ಲಿ ವಾಸವಿದ್ದರು. ಪುಟ್ಟ ತೆರಾಲು ಗ್ರಾಮದವನೇ ಆಗಿದ್ದು, ವಿನೋದ್ ಕೂಲಿ ಕೆಲಸ ಹುಡುಕಿ ಅಸ್ಸಾಂನಿಂದ ಬಂದಿದ್ರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights