ಕೊರೊನಾ ಸೋಂಕಿತ ವ್ಯಕ್ತಿ 3 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…!

ಬೆಂಗಳಳೂರಿನಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 466 ನೇ ಕೊರೊನಾ ಸೋಂಕಿತ 56 ವರ್ಷದ ವ್ಯಕ್ತಿ ಖಿನ್ನತೆಯಿಂದ ಆಸ್ಪತ್ರೆಯ 3 ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯ ಟ್ರೋಮಾ ಸೆಂಟರ್ ನಲ್ಲಿ ಖಿನ್ನತೆಯಿಂದ ಕೊರೊನಾ ಶಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವಾತ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ 4 ವರ್ಷದಿಂದ ಅವರು ಕಿಡ್ನಿ ವೈಫಲ್ಯವಾಗಿತ್ತು. ಬೆಂಗಳೂರಿನಲ್ಲಿ ಅಣ್ಣನ ಮನೆಯಲ್ಲಿವ ವಾಸವಾಗಿದ್ದರು. ವ್ಯಕ್ತಿಗೆ ಕೊರೊನಾ ಹಿನ್ನೆಲೆ ಕುಟುಂಬಸ್ಥರನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights