ಕೊರೊನಾ ಹಾವಳಿಗೆ ಕಂಗಾಲಾದ ವಿಶ್ವದ ದೊಡ್ಡಣ್ಣ : 24 ಗಂಟೆಗಳಲ್ಲಿ 1,185 ಜನ ಮೃತ!
ಕಾಡ್ಗಿಚ್ಚಿನಂತೆ ಹರಡುತ್ತಿರುವ ಕೋವಿಡ್-19 ವಿಶ್ವದ ದೊಡ್ಡಣ್ಣನನ್ನು ಹಿಂಡೆ ಹಿಪ್ಪೆಯನ್ನಾಗಿ ಮಾಡಿದೆ. ದಿನೇ ದಿನೇ ಅಮೆರಿಕಾದಲ್ಲಿ ಸೋಂಕಿತ ಹಾಗೂ ಸಾವನ್ನಪ್ಪುವವರ ಸಂಖ್ಯೆ ಅಧಿಕವಾಗುತ್ತಿದ್ದು ಸಂಕಷ್ಟಕ್ಕೆ ಗುರಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ 1,185 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 67,444 ಕ್ಕೆ ಏರಿಕೆ ಆಗಿದೆ.
ಹೌದು… ಕೊರೊನಾ ಹಾವಳಿಗೆ ಅಮೆರಿಕಾ ಅಕ್ಷರಶ: ನಲುಗಿ ಹೋಗಿದೆ. ಪ್ರತಿನಿತ್ಯ 2 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪುತ್ತಿದ್ದಾರೆ. ಈವರೆಗೆ 11.60 ಲಕ್ಷ ಮಂದಿಯಲ್ಲಿ ಸೋಂಕಿರುವುದು ದೃಢಪಟ್ಟಿದ್ದು ಅಮೆರಿಕಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಜಗತ್ತಿನಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಈವರೆಗೆ 34.84 ಲಕ್ಷ ಜನರಿಗೆ ಸೋಂಕು ತಗುಲಿದೆ. 2.44 ಲಕ್ಷ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇವರಲ್ಲಿ ಕೇವಲ 11.21 ಲಕ್ಷ ಮಂದಿ ಮಾತ್ರ ಗುಣಮುಖರಾಗಿದ್ದಾರೆ.
ಇನ್ನೂ ವಿಶ್ವದಲ್ಲಿ ಕೊರೊನಾ ಪೀಡಿತರ ದೇಶಗಳಲ್ಲಿ ಸ್ಪೇನ್ಗೆ ಎರಡನೇ ಸ್ಥಾನ ಸಿಕ್ಕಿದೆ. ಈ ದೇಶದಲ್ಲಿ ಸೋಂಕಿತರ ಸಂಖ್ಯೆ 2.45 ಲಕ್ಷದ ಗಡಿ ತಲುಪಿದೆ. 25 ಸಾವಿರ ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ಇಟಲಿಯಲ್ಲಿ 2 ಲಕ್ಷ ಜನರಿಗೆ ಸೋಂಕು ಅಂಟಿದ್ದು, ಸಾವಿನ ಸಂಖ್ಯೆ 28 ಸಾವಿರದ ಗಡಿ ತಲುಪಿದೆ. ಈ ಮೊದಲ ವಾರಗಳಿಗೆ ಹೋಲಿಸಿದರೆ ಇಟಲಿಯಲ್ಲಿ ಕೊರೋನಾ ಕೊಂಚ ನಿಯಂತ್ರಣಕ್ಕೆ ಬಂದಿದೆ ಎನ್ನಬಹುದು.
ಜರ್ಮನಿ, ಫ್ರಾನ್ಸ್, ಇಂಗ್ಲೆಂಡ್ನಲ್ಲೂ ಪರಿಸ್ಥಿತಿ ಕೈ ಮೀರಿದೆ. ಫ್ರಾನ್ಸ್ನಲ್ಲಿ 1.68 ಲಕ್ಷ ಮಂದಿಗೆ ಕೊರೋನಾ ದೃಢಪಟ್ಟಿದೆ. 28 ಸಾವಿರ ಮಂದಿ ಮೃತಪಟ್ಟಿದ್ದಾರೆ. ಜರ್ಮನಿಯಲ್ಲಿ 1.64 ಲಕ್ಷ ಜನರಿಗೆ ಕೊರೋನಾ ಸೋಂಕಿದೆ. 6 ಸಾವಿರ ಜನರು ಸಾವನ್ನಪ್ಪಿದ್ದಾರೆ.
Thank you, I’ve just been searching for info approximately this topic for a while and yours is the best I’ve found out till now.
However, what in regards to the bottom line? Are you sure concerning the supply?