ಗಡಿ ವಿಚಾರದಲ್ಲಿ ಚೀನಾ ಹೆಸರು ಹೇಳಲು ಮೋದಿ ಸರ್ಕಾರ ಭಯಪಡುತ್ತಿದೆ: ಸುರ್ಜೆವಾಲ್

ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಇಂದು ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದು, ಅವರ ಭಾಷಣದ ಬಗ್ಗೆ ಪ್ರತಿಕ್ರಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲ್, ಗಡಿ ವಿಚಾರವಾಗಿ ಚೀನಾದ ಹೆಸರು ಹೇಳಲು ಮೋದಿ ಸರ್ಕಾರ ಭಯ ಪಡುತ್ತಿದೆ ಎಂದು ಟೀಕಿಸಿದ್ದಾರೆ.

“ಭಾರತದ ಭೂಪ್ರದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿದ ಚೀನಾ ಹೆಸರು ಹೇಳಲು ಅಧಿಕಾರದಲ್ಲಿ ಇರುವವರು ಹೆದರುತಿದ್ದಾರೆ. ಭಾರತದ ಸಾರ್ವಭೌಮತ್ವದ ಮೇಲೆ ಕಣ್ಣು ಹಾಕಿದವರಿಗೆ ಭಾರತೀಯ ಸೈನಿಕರು ಗಡಿ ನಿಯಂತ್ರಣಾ ರೇಖೆಯಿಂದ ಹಿಡಿದು, ವಾಸ್ತವ ಗಡಿ ನಿಯಂತ್ರಣಾ ರೇಖೆಯ ವರೆಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. ಆದರೆ, ಚೀನಾದ ಹೆಸರನ್ನೇ ಉಲ್ಲೇಖಿಸಲಿಲ್ಲ. ದೇಶದ ಸಾರ್ವಭೌಮತ್ವವನ್ನು ಕಾಪಾಡುವಲ್ಲಿ ಇಡೀ ದೇಶವೇ ಒಗ್ಗಟ್ಟಾಗಿದೆ. ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ ಮತ್ತು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುತ್ತಾನೆ” ಎಂದು ಸುರ್ಜೆವಾಲ್ ಹೇಳಿದ್ದಾರೆ.

ಕಳೆದ ಎರಡು ತಿಂಗಳಲ್ಲಿ ಗಡಿ ಬಗ್ಗೆ ಮಾತನಾಡಿರುವ ಮೋದಿಯವರು ಇದೂವರೆಗೂ ಚೀನಾ ಹೆಸರನ್ನು ಉಲ್ಲೇಖಿಸಿಲ್ಲ. ಅವರು ಚೀನಾದ ಹೆಸರು ಹೇಳಲು ಭಯಪಡುತ್ತಿರುವಂತಿದೆ ಎಂದು ಅವರು ಹೇಳಿದ್ದಾರೆ.

‘ದೇಶವನ್ನು ರಕ್ಷಿಸಲು ಮತ್ತು ಚೀನಾವನ್ನು ಹಿಂದಕ್ಕೆ ತಳ್ಳಲು ಸರ್ಕಾರ ಏನು ಮಾಡುತ್ತಿದೆ ಎಂದು ಪ್ರತಿಯೊಬ್ಬ ಭಾರತೀಯರು ಈ ಸ್ವಾತಂತ್ರ್ಯ ದಿನಾಚರಣೆ ದಿನ ಸರ್ಕಾರವನ್ನು ಕೇಳಬೇಕಿದೆ. ನಮ್ಮ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇದೆಯೇ?, ದೇಶದಲ್ಲಿ ಮುಕ್ತವಾಗಿ ಮಾತನಾಡುವ ಸ್ವಾತಂತ್ರ್ಯವಿದೆಯೇ? ಎಂದು ಪ್ರಶ್ನಿಸುವುದೂ ಈ ಸಂದರ್ಭದಲ್ಲಿ ಮುಖ್ಯವಾಗಿದೆ ಎಂದು ಹೇಳಿದ್ದಾರೆ.


Read Also: ರಾಜಸ್ಥಾನ ಸರ್ಕಾರದ ಅಸ್ಥಿರಕ್ಕೆ ಸಚಿನ್ ಕಾರಣವಲ್ಲ; ಯಾರು ಕಾರಣವೆಂದು ಬಹಿರಂಗ ಪಡಿಸಿದ ಗೆಹ್ಲೋಟ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights