ಗುಜರಾತ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ : 8 ಮಂದಿ ಸಾವು – 50 ಕಾರ್ಮಿಕರಿಗೆ ಗಾಯ..!
ಗುಜರಾತ್‌ನಲ್ಲಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಾಯ್ಲರ್ ಸ್ಫೋಟಕೊಂಡು ಕಾರ್ಖಾನೆಯಲ್ಲಿದ್ದ 8 ಮಂದಿ ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ.
ಗುಜರಾತ್‌ನ ಭರೂಚ್ ಜಿಲ್ಲೆಯ ದಹೇಜ್‌ನಲ್ಲಿ ರಾಸಾಯನಿಕ ಕಾರ್ಖಾನೆಯ ಬಾಯ್ಲರ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಕಾರ್ಮಿಕರಲ್ಲಿ ಕೆಲವರು ಗಂಭೀರ ಸ್ಥಿತಿಯಲ್ಲಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಪೀಡಿತ ಕಾರ್ಖಾನೆಯ ಬಳಿ ಮೆಥನಾಲ್ ಮತ್ತು ಕ್ಸಿಲೀನ್ ರಾಸಾಯನಿಕಗಳ ಕಂಪನಿಗಳು ಇರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ಹತ್ತಿರದ ಲುವಾರಾ ಮತ್ತು ಲಖಿಗಮ್ ಗ್ರಾಮಗಳಿಂದ ಸುಮಾರು 4,800 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.

“ದಹೇಜ್ ವಿಶೇಷ ಆರ್ಥಿಕ ವಲಯ -1 ರಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸುಮಾರು 230 ಕಾರ್ಮಿಕರು ಉಪಸ್ಥಿತರಿದ್ದರು. ಇವರಲ್ಲಿ ಬಾಯ್ಲರ್ ಸ್ಫೋಟದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸುಮಾರು 50 ಮಂದಿ ಗಾಯಗೊಂಡಿದ್ದಾರೆ” ಎಂದು ದಹೇಜ್ ಸಾಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ವಿಪುಲ್ ಗಗಿಯಾ ಹೇಳಿದ್ದಾರೆ.
ಬೆಂಕಿ ಕಾಣಿಸಿಕೊಂಡ ನಂತರ ಕಾರ್ಖಾನೆಯಿಂದ ಆರು ಸುಟ್ಟ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ, ಭರೂಚ್‌ನ ಪ್ರತ್ಯೇಕ ಆಸ್ಪತ್ರೆಗಳಲ್ಲಿ ಇನ್ನೂ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.
“ಗಾಯಗೊಂಡ 32 ಕಾರ್ಮಿಕರನ್ನು ಭರೂಚ್ ಮತ್ತು ಹತ್ತಿರದ ಪ್ರದೇಶಗಳಲ್ಲಿನ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ” ಎಂದು ಅವರು ಹೇಳಿದರು, ಕೆಲವು ಕಾರ್ಮಿಕರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎನ್ನಲಾಗುತ್ತಿದೆ. ಸುಮಾರು 18-20 ಕಾರ್ಮಿಕರಿಗೆ ಪ್ರಾಥಮಿಕ ನೆರವು ನೀಡಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಹನ್ನೊಂದು ಅಗ್ನಿಶಾಮಕ ಟೆಂಡರ್‌ಗಳಿಗೆ ಭಾರಿ ಪ್ರಮಾಣದ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಸುಮಾರು ಆರು ಗಂಟೆ ಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಗುಜರಾತ್ ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್ ಈ ಘಟನೆಗೆ ರಾಜ್ಯ ಬಿಜೆಪಿ ಸರ್ಕಾರವನ್ನು ದೂಷಿಸಿದರು.
ಗುಜರಾತ್‌ನಲ್ಲಿ ಕೈಗಾರಿಕಾ ಅಪಘಾತಗಳು ಹೆಚ್ಚುತ್ತಿರುವ ಕಾರಣ ಕಾರ್ಖಾನೆಗಳು ಸಂಪೂರ್ಣ ಸುರಕ್ಷತಾ ಲೆಕ್ಕಪರಿಶೋಧನೆಗೆ ಒಳಗಾಗಬೇಕಾಗಿದೆ ಎಂದು ಅವರು ಹೇಳಿದರು. ಕಾರ್ಮಿಕ ಕಾನೂನುಗಳಲ್ಲಿನ ಇತ್ತೀಚಿನ ಬದಲಾವಣೆಗಳ ಬಗ್ಗೆ ಪಟೇಲ್ ಕಳವಳ ವ್ಯಕ್ತಪಡಿಸಿದರು, ಇದು “ಅಸುರಕ್ಷಿತ ಕೆಲಸದ ಪರಿಸ್ಥಿತಿಗಳನ್ನು” ರಚಿಸಲು ಕಾರ್ಖಾನೆಗಳನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.

