ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ 5.5 ಲಕ್ಷ ಏರಿಕೆಯಾಗುವ ಸಾಧ್ಯತೆಯಿದೆ: ದೆಹಲಿ ಸರ್ಕಾರ

ದೆಹಲಿಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸಮುದಾಯಕ್ಕೆ ಹರಡುವ ಹಂತ ತಲುಪುವ ಆತಂಕ ಎದುರಾಗಿದೆ. ಆದರೆ ಕೇಂದ್ರ ಸರ್ಕಾರ ಕೊರೊನಾ ಹರಡುವಿಕೆಯ ಬಗ್ಗೆ ಯಾವುದೇ ದೃಷ್ಟಿಕೋವನ್ನೂ ಹೊಂದಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟಗಳನ್ನು ಎದುರಿಸಬೇಕಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ತಿಳಿಸಿದ್ದಾರೆ.

ದೆಹಲಿಯಲ್ಲಿ ಕೊರೋನಾ ಸೋಂಕು ಹರಡುವತ್ತಿರುವುದನ್ನು ಗಮನಿಸಿದರೆ, ಮುಂದಿನ ಜುಲೈ ತಿಂಗಳ ಮಧ್ಯದ ವೇಳಿಗೆ ಸುಮಾರು 2,25 ಲಕ್ಷ ಸೋಂಕಿತ ಪ್ರಕರಣಗಳು ದಾಖಲಾಗುವು ಸಾಧ್ಯತೆ ಇದೆ. ಅಲ್ಲದೆ, ಸೋಂಕಿತರ ಸಂಖ್ಯೆ ಜುಲೈ ಅಂತ್ಯದ ವೇಳೆಗೆ 5.5 ಲಕ್ಷಕ್ಕೆ ಏರಬಹುದು ಎಂದು ಅಂದಾಜಿಸಲಾಗಿದೆ. ಈ ವೇಳೆಗೆ ಸುಮಾರು 80,000 ಬೆಡ್ ಗಳು ಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

How Deadly is Covid-19 for India? - India Legal

ವರದಿಗಳ ಪ್ರಕಾರ, ಜೂನ್ ಅಂತ್ಯಕ್ಕೆ ದೆಹಲಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕೆ ಏರಿಕೆಯಾಗಲಿದೆ. ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 15 ಸಾವಿರ ಬೆಡ್ ಗಳು ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂದು ನಾವು ಹೇಳಿದ್ದೇವೆ. ಆದರೆ ಸಭೆಯಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳು ಸೋಂಕಿತರ ಸಂಖ್ಯೆ ಏರಿಕೆಯಾಗುವುದಿಲ್ಲ ಎಂದು ವಾದಿಸುತ್ತಿದ್ದಾರೆ. ಹೀಗಾಗಿಯೇ ಆಸ್ಪತ್ರೆಯ ಬೆಡ್ ಗಳನ್ನು ದೆಹಲಿ ನಿವಾಸಿಗಳಿಗೆ ಮೀಸಲಿಡಲು ಸಂಪುಟ ಸಭೆ ನಿರ್ಧರಿಸಿತ್ತು. ಈ ನಿರ್ಧಾರವನ್ನು ತಿರಸ್ಕರಿಸಿರುವ ಲೆಫ್ಟಿನೆಂಟ್ ಗವರ್ನರ್ ಅವರಿಗೆ ತಮ್ಮ ನಿರ್ಧಾರ ಮರು ಪರಿಶೀಲಿಸುವಂತೆ ಕೇಳಿದ್ದೇವೆ ಎಂದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights