ದಸರಾದ ಗಜಪಡೆಯ ಮೊದಲ ತಂಡದ ಸದಸ್ಯ ಈಶ್ವರ ಆನೆ ಕಾಡಿಗೆ…

ದಸರಾದ ಗಜಪಡೆಯ ಮೊದಲ ತಂಡದ ಸದಸ್ಯ ಈಶ್ವರ ಆನೆಯನ್ನು ಕಾಡಿಗೆ ಹಿಂದಕ್ಕೆ ಕಳುಹಿಸಲು ನಿರ್ಧರಿಸಿಲಾಗಿದೆ.

ದಸರಾ ಸಿದ್ಧತಾ ಸಭೆಯಲ್ಲಿ ಇಂದು ಈಶ್ವರ ಆನೆ ಬಗ್ಗೆ ಸಚಿವ ಸೋಮಣ್ಣ ಆತಂಕ ವ್ಯಕ್ತಪಡಿಸಿದರು. ನಗರದ ವಾತಾವರಣಕ್ಕೆ ಈಶ್ವರ ಆನೆ ಹೊಂದಿಕೊಳ್ಳುತ್ತಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆ ಅರಣ್ಯಾಧಿಕಾರಿಗಳ ಆನೆಯನ್ನು ವಾಪಸ್ ಕಾಡಿಗೆ ಬಿಡಲು ತೀರ್ಮಾನಿಸಿದ್ದಾರೆ. ಈಶ್ವರ ಆನೆ ಬದಲು ಗಜಪಡೆಗೆ ಪರ್ಯಾಯವಾಗಿ ಬೇರೆ ಆನೆ ತರಲು ಅರಣ್ಯಾಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಈಶ್ವರ ಆನೆ ವಿಚಾರವಾಗಿ ಸಾರ್ವಜನಿಕರಿಂದ ದೂರು ಬರುತ್ತಿರುವುದರಿಂದ ಈ ಬಗ್ಗೆ ಸೋಮಣ್ಣ ಅವರು ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಇಂತಹ ದೂರುಗಳು ಬಂದಾಗ ನಾವು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆನೆಯನ್ನು ಬದಲಾಯಿಸಲೇ ಬೇಕಾಗುತ್ತದೆ ಎಂದು ಡಿಸಿಎಫ್(ಅರಣ್ಯ ಉಪ ಸಂರಕ್ಷಣಾಧಿಕಾರಿ) ಅಲೆಕ್ಸಾಂಡರ್ ಅವರು ತಿಳಿಸಿದ್ದಾರೆ. ಭದ್ರತೆ ದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದೇ ಮೊದಲ ಬಾರಿಗೆ ಈಶ್ವರ ಆನೆಯನ್ನು ದಸರಾ ಗಜಪಡೆಗೆ ಸೇರಿಸಿಕೊಳ್ಳಲಾಗಿತ್ತು. ಆದರೆ ನಗರ ಪ್ರದೇಶದಲ್ಲಿ ಗಜಪಡೆ ತಾಲೀಮು ಆರಂಭಿಸಿದ ದಿನದಿಂದಲೂ ಈಶ್ವರ ಆನೆ ಗಾಬರಿಗೊಳ್ಳುತಿತ್ತು. ಆಗ ವೈದ್ಯರು ಹಾಗೂ ಅಧಿಕಾರಿಗಳು ದಿನ ಕಳೆಯುತ್ತಿದ್ದಂತೆ ಆನೆ ಈ ವಾತಾವರಣಕ್ಕೆ ಹೊಂದಿಕೊಳ್ಳುತ್ತದೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಪ್ರತಿದಿನ ತಾಲೀಮು ಮಾಡುತ್ತಿರುವಾಗಲೂ ಈಶ್ವರ ಆನೆ ನಗರದ ವಾತಾವರಣಕ್ಕೆ ಬೆಚ್ಚಿಬೀಳುತ್ತಿತ್ತು. ಹೊಸ ವಾತಾವರಣಕ್ಕೆ ಅದು ಹೊಂದಿಕೊಳ್ಳಲು ಸಾಧ್ಯವಾಗದ ಹಿನ್ನೆಲೆ ಈಶ್ವರ ಆನೆಯನ್ನು ವಾಪಸ್ ಅರಣ್ಯಕ್ಕೆ ಕಳುಹಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Spread the love

Leave a Reply

Your email address will not be published. Required fields are marked *