ದೆಹಲಿಯ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಚಿಕಿತ್ಸೆ; 20% ಹಾಸಿಗಗಳು ಮೀಸಲಿಡಬೇಕು

ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಖಾಸಗಿ ಆಸ್ಪತ್ರೆಗಳು 20% ಹಾಸಿಗೆಗಳನ್ನು ಕೊರೊನಾ ಚಿಕಿತ್ಸೆಗೆ ಮೀಸಲಿಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದಾರೆ.

ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ಒಟ್ಟು 117 ಖಾಸಗಿ ಆಸ್ಪತ್ರೆಗಳಿವೆ. ಅವುಗಳಲ್ಲಿನ ಹಾಸಿಗೆಗಳಲ್ಲಿ ಕೋವಿಡ್ ರೋಗಿಗಳಿಗೆ ಶೇ 20 ರಷ್ಟು ಹಾಸಿಗೆಗಳನ್ನು ಕಾಯ್ದಿರಿಸಲು ತಿಳಿಸಲಾಗಿದೆ ಎಂದಿದ್ದಾರೆ.

“COVID-19 ಚಿಕಿತ್ಸೆಗೆ ಹೋಗುವವರಿಗೆ ಇಂದಿನಿಂದ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ 2,000 ಹೊಸ ಹಾಸಿಗೆಗಳು ಲಭ್ಯವಿರುತ್ತವೆ” ಅವುಗಳನ್ನು ಬಳಸಬಹುದು ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ಲಾಕ್‌ಡೌನ್‌ನಲ್ಲಿನ ಸಡಿಲತೆ ಕಾರಣ ದೆಹಲಿಯಲ್ಲಿ COVID-19 ಪ್ರಕರಣಗಳು ಹೆಚ್ಚಿವೆ. ಆದರೆ ಮರಣ ಪ್ರಮಾಣ ಅಥವಾ ಗಂಭೀರ ಪ್ರಕರಣಗಳ ಸಂಖ್ಯೆ ವೇಗವಾಗಿ ಏರಿಕೆಯಾಗದಿದ್ದರೆ ಚಿಂತೆ ಇಲ್ಲ. ಜನರು ವೈರಸ್‌ಗೆ ತುತ್ತಾಗಿ ಚೇತರಿಸಿಕೊಂಡರೆ, ಚಿಂತೆ ಮಾಡಲು ಏನೂ ಇಲ್ಲ ಅವರು ತಿಳಿಸಿದ್ದಾರೆ.

COVID-19 ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿವೆ ಎಂದು ನಾನು ಒಪ್ಪಿಕೊಂಡರೂ ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹೆಚ್ಚಿನ ಪ್ರಕರಣಗಳು ಗಂಭೀರವಲ್ಲ ಅಥವಾ ಲಕ್ಷಣರಹಿತವಾಗಿದೆ. ಹಾಗಾಗಿ ಅಂತವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಇಲ್ಲಿಯವರೆಗೂ 13418 ಪ್ರಕರಣಗಳು ಕಂಡುಬಂದಿದ್ದು, 6540 ಜನ ಗುಣಮುಖರಾಗಿದ್ದಾರೆ ಮತ್ತು 261 ಜನ ಮೃತಪಟ್ಟಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights