ದೆಹಲಿ ಹಿಂಸಾಚಾರದ ಪ್ರಕರಣದಲ್ಲಿ ಜಾಮಿಯಾ ವಿದ್ಯಾರ್ಥಿ ಬಂಧನ

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ ಭಾರಿ ಹಿಂಸಾಚಾರ ಪ್ರಕರಣದಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಈ ಹಿಂಸಾಚಾರದಲ್ಲಿ 50 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದರು.

ಮಿರಾನ್ ಹೈದರ್ ಎಂಬ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಈತ ಲಾಲು ಯಾದವ್ ಅವರ ರಾಷ್ಟ್ರೀಯ ಜನತಾದಳ (ಆರ್‌ಜೆಡಿ)ಯ ದೆಹಲಿ ಯುವ ವಿಭಾಗದ ಮುಖ್ಯಸ್ಥನಾಗಿದ್ದ ಎಂದು ತಿಳಿದುಬಂದಿದೆ.

ನಮಸ್ಥೆ ಟ್ರಂಪ್‌ ಕಾರ್ಯಕ್ರಮಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡು ದಿನಗಳ ಭಾರತ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಫೆಬ್ರವರಿ ಕೊನೆಯ ವಾರದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸತತ ನಾಲ್ಕು ದಿನಗಳ ಕಾಲ ನಡೆದ ಹಿಂಸಾಚಾರದಿಂದ ಈಶಾನ್ಯ ದೆಹಲಿಯಲ್ಲಿ 54 ಜನರು ಸಾವನ್ನಪ್ಪಿದರು. ಅಲ್ಲದೆ ನೂರಾರು ಜನರು ಗಾಯಗೊಂಡಿದ್ದರು.

ಈ ಹಿಂಸಾಚಾರಕ್ಕೆ ಉತ್ತರ ಪ್ರದೇಶದಿಂದ ಗೂಂಡಾಗಳನ್ನು ಸಂಘಟಿಸಲು ಮತ್ತು ಹಿಂಸಾಚಾರ ನಡೆಸಲು ಜಾಗಗಳನ್ನು ಗುರುತಿಸಲು ವಾಟ್ಸಾಪ್ ಅನ್ನು ಬಳಸಲಾಗಿದೆ. ಈ ಕೃತ್ಯಗಳಲ್ಲಿ ಮಿರಾನ್ ಹೈದರ್‌ ಭಾಗಿಯಾಗಿರುವ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದರು.

ಹಿಂಸಾಚಾರದ ಸಮಯದಲ್ಲಿ ಇಂಟೆಲಿಜೆನ್ಸ್ ಬ್ಯೂರೋ ಉದ್ಯೋಗಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆಮ್‌ ಆದ್ಮಿ ಪಕ್ಷದಿಂದ ಅಮಾನತುಗೊಂಡಿರುವ ತಾಹಿರ್ ಹುಸೇನ್ ಆರೋಪಿಯಾಗಿದ್ದಾನೆ.

ಹಿಂಸಾಚಾರದಲ್ಲಿ ಮನೆಗಳು ಮತ್ತು ಅಂಗಡಿಗಳನ್ನು ಸುಟ್ಟು ಹಾಕಲಾಯಿತು. ಅದಷ್ಟೇ ಅಲ್ಲದೆ, ಒಂದು ಮಸೀದಿಯನ್ನೂ ಸುಟ್ಟಹಾಕಲಾಗಿದೆ. ಅಲ್ಲದೆ, ಪೊಲೀಸರೂ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಪೌರತ್ವ ಕಾಯಿದೆ ವಿರೋಧಿಸಿ ನಡೆಯುತ್ತಿದ್ದ ಹೋರಾಟದ ಸಂದರ್ಭದಲ್ಲಿ ಪೌರತ್ವ ಕಾಯಿದೆ ಪರವಾಗಿದ್ದವರು ಯಾಮಿಯಾ ವಿವಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು.

ಜಾಮಿಯಾವ ವಿವಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನಾ ಮೆರವಣಿಗೆಯ ಮೇಲೆ ದುಶ್ಕರ್ಮಯೊಬ್ಬ ಗುಂಡು ಹಾರಿಸಿದ್ದ. ಅಲ್ಲದೆ, ಶಾಹಿನ್‌ ಬಾಗ್‌ನಲ್ಲಿ ಮಹಿಳೆಯರು ನಡೆಸುತ್ತಿದ್ದ ಪ್ರತಿಭಟನಾ ಸತ್ಯಾಗ್ರಹದ ಜಾಗದಲ್ಲಿ ಪೆಟ್ರೋಲ್‌ ಬಾಂಬ್‌ ಎಸೆಯಲಾಗಿತ್ತು. ಈ ಪ್ರಕರಣಗಳು ಸಿಎಎ ವಿರೋಧಿ ಹೋರಾಟವನ್ನು ಹತ್ತಿಕ್ಕಲು ಸಿಎಎ ಪರ ನಡೆದ ಹಿಂಸಾಚಾರಗಳು ಎಂಬುದು ಸ್ಪಷ್ಟವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರ ವಿರುದ್ಧ ನೆಟ್ಟಿಗರು ಕಿಡಿ ಕಾರಿದ್ದಾರೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights