ನಟಿ ಚಂದನಾ ಆತ್ಮಹತ್ಯೆ ಪ್ರಕರಣ; ಆರೋಪಿಯನ್ನು ಬಂಧಿಸಿದ ಪೊಲೀಸರು!
ಪ್ರೀತಿಸಿ ಮೋಸಹೋದ ಕಾರಣದಿಂದಾಗಿ ಕಿರುತೆರೆ ಹಾಗೂ ಸ್ಯಾಂಡಲ್‌ವುಡ್ ನಟಿ ಚಂದನಾ ಸೆಲ್ಪಿ ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದನಾ ಪ್ರತಿಕರ ಹಾಗೂ ಆರೋಪಿಯಾಗಿರುವ ದಿನೇಶ್‌ನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಜೂ.1 ರಂದು ಚಂದನಾ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಮಾಡಿಟ್ಟಿದ್ದ ಸೆಲ್ಫಿ ವೀಡಿಯೋದಲ್ಲಿ ದಿನೇಶ್ ನನಗೆ ಮೋಸ ಮಾಡಿದ್ದಾನೆ ಎಂದು ಹೇಳಿದ್ದರು. ಯುವತಿಗೆ ಮೋಸ ಮಾಡಿದ ಆರೋಪದ ಹಿನ್ನಲೆ ದಿನೇಶ್‌ನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಕಳೆದ ಐದು ವರ್ಷಗಳಿಂದ ದಿನೇಶ್ ಹಾಗೂ ಚಂದನಾ ಪ್ರೀತಿಸುತ್ತಿದ್ದರು. ಅಲ್ಲದೆ, ಮದುವೆ ಆಗುವ ನಿರ್ಧಾರವನ್ನು ಕೂಡ ತೆಗೆದುಕೊಂಡಿದ್ದರು. ಇತ್ತೀಚೆಗೆ ಮದುವೆಯಾಗುವಂತೆ ದಿನೇಶ್ಗೆ ಚಂದನಾ ಒತ್ತಾಯ ಮಾಡಿದ್ದರು. ಆದರೆ, ಇತ್ತೇಚೆಗೆ ಮದುವಯಾಗಲು ನಿರಾಕರಿಸಿದ್ದ ದಿನೇಶ್ ಆಕೆಯ ನಡತೆಯೇ ಸರಿಯಿಲ್ಲವೆಂದು ದೂರು ಹೊರಿಸಿದ್ದ.
ಮದುವೆ ಆಗುವುದಾಗಿ ನಂಬಿಸಿದ್ದ ದಿನೇಶ್, ಚಂದನಾರೊಂದಿಗೆ ದೈಹಿಕವಾಗಿಯೂ ಹೊಂದಾಗಿದ್ದರು. ಅಲ್ಲದೆ, ಐದು ಲಕ್ಷ ಹಣ ಪಡೆದು ದಿನೇಶ್ ವಂಚಿಸಿದ್ದ ಎಂದು ಚಂದನಾ ಸಾವಿಗೂ ಮುನ್ನ ಮಾಡಿರುವ ವಿಡಿಯೋದಲ್ಲಿ ಹೇಳಿಕೊಂಡಿದ್ದರು. ಹೀಗಾಗಿ, ಚಂದನಾ ಕುಟುಂಬದವರು ಪೊಲೀಸ್ ಠಾಣೆಗೆ ದಿನೇಶ್ ವಿರುದ್ಧ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.