ನಟ ಸುಶಾಂತ್ ಸಿಂಗ್ ಆತ್ಮಹತ್ಯೆಯಾ? ಕೊಲೆಯಾ? ಪೋಸ್ಟ್ ಮಾರ್ಟ್ಂ ರಿಪೋರ್ಟ್ ಹೇಳಿದ್ದೇನು?
ಬಾಲಿವುಡ್ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಆದರೆ, ಅವರ ಸಾವಿನ ಸುತ್ತ ಹಲವಾರು ರೀತಿಯ ಅನುಮಾನಗಳು ಕಾಡಲಾರಂಭಿಸಿದ್ದವು. ಇದೀಗ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ಅವರ ಸಾವುನ ಬಗ್ಗೆ ಮಾಹಿತಿ ನೀಡಲಾಗಿದೆ.
34 ವರ್ಷವಯಸ್ಸಿನ ಸುಶಾಂತ್ ಸಿಂಗ್ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನಿನ್ನೆ ಬೆಳಗ್ಗೆ ಅವರ ಮನೆಯ ಕೆಲಸದವರು ಬಂದು ನೋಡಿದಾಗ ಈ ವಿಷಯ ಗೊತ್ತಾಗಿತ್ತು. ಕಳೆದ 6 ತಿಂಗಳಿನಿಂದ ಸುಶಾಂತ್ ಸಿಂಗ್ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿತ್ತು. ಆದರೂ, ಯಾರಾದರೂ ಮಾಡಿದ ಹತ್ಯೆ ಇರಬಹುದೇ ಎನ್ನುವ ಅನುಮಾನ ಕೂಡ ಕಾಡಿತ್ತು.
ನೇಣು ಬಿಗಿದುಕೊಂಡ ಕಾರಣಕ್ಕೇ ಸುಶಾಂತ್ ಮರಣ ಹೊಂದಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಹೇಳಲಾಗಿದೆ. ಅವರ ದೇಹದ ಮೇಲೆ ಯಾವುದೇ ಗಾಯದ ಕಲೆಗಳು ಇರಲಿಲ್ಲ. ಹೀಗಾಗಿ ಇದು ಆತ್ಮಹತ್ಯೆ ಎಂದು ಪೋಸ್ಟ್ ಮಾರ್ಟಮ್ ರಿಪೋರ್ಟ್ನಲ್ಲಿ ತಿಳಿಸಲಾಗಿದೆ.