ನಳೀನ್‍ಕುಮಾರ್ ಕಟೀಲ್ ಗೆ ರಾಜಕೀಯ ಜ್ಞಾನವೇ ಇಲ್ಲ – ಸಿದ್ದರಾಮಯ್ಯ ಲೇವಡಿ

ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಹೇಳಿಕೆ ನೀಡಿದ್ದ  ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರಿಗೆ ರಾಜಕೀಯ ಜ್ಞಾನವೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಂಯ್ಯ, ಕಟೀಲ್ ಅವರ ಹೇಳಿಕೆಗೆ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಶಾಸಕರಲ್ಲಿ ಸಂಪುಟ ವಿಸ್ತರಣೆಯ ಬಳಿಕ ಅಸಮಾಧಾನ ಇರುವುದು ನಿಜ. ಆದರೆ, ನನ್ನ ಜತೆ ಯಾರೂ ಮಾತನಾಡಿಲ್ಲ. ಬಿಜೆಪಿ 32 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಹೇಳಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ವಿಚಾರ ನಮ್ಮಲ್ಲಿ ಚರ್ಚೆಯಾಗಿಲ್ಲ. ಇಬ್ರಾಹಿಂ ಅವರ ಬಳಿ ಹೆಚ್ಚಿನ ಮಾಹಿತಿ ಇರಬಹುದು ಎಂದು ಜಾರಿಕೆಯ ಉತ್ತರ ನೀಡಿದರು.

ಕೆಪಿಸಿಸಿ ಅಧ್ಯಕ್ಷರನ್ನು ಕಾಂಗ್ರೆಸ್ ಹೈಕಮಾಂಡ್ ಶೀಘ್ರ ನೇಮಕ ಮಾಡಲಿದೆ. ಉತ್ತರ ಕರ್ನಾಟಕ, ಪ್ರಾದೇಶಿಕತೆ, ಜಾತಿ ಆಧರಿಸಿ ಹೈಕಮಾಂಡ್ ಅಧ್ಯಕ್ಷರನ್ನು ನೇಮಕ ಮಾಡಲಿದೆ. ಈ ವಿಷಯದಲ್ಲಿ ಶೀಘ್ರವೇ ಆದೇಶ ಹೊರ ಬೀಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಹದಾಯಿ ವಿಷಯದಲ್ಲಿ ಸುಪ್ರೀಂಕೋರ್ಟ್ ತೀರ್ಪು ಹೊರ ಬಿದ್ದಿದೆ. ಕೂಡಲೇ ನ್ಯಾಯಾಧೀಕರಣದ ತೀರ್ಪನ್ನು ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಈ ನಿಟ್ಟಿನಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಬೇಕೆಂದು ಸಿದ್ದರಾಮಯ್ಯ ಸಲಹೆ ನೀಡಿದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights