ನಿಯಂತ್ರಣಕ್ಕೆ ಬಾರದ ಕೊರೊನಾ; ಒಂದೇ ದಿನ 10,000ಕ್ಕೂ ಹೆಚ್ಚು ಪ್ರಕರಣ ದಾಖಲು!
ಭಾರತದಲ್ಲಿ ಕೊರೊನಾ ಸೋಂಕಿನ ಹರಡುವಿಕೆ ಮುಂದುವರೆಯುತ್ತಲೇ ಇದೆ. ದಿನಕ್ಕೆ 10,000 ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ನಿನ್ನೆ ಒಂದೇ ದಿನದಲ್ಲಿ 10,974 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3.54 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುುಟಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಲಾಕ್’ಡೌನ್ ತೆರವು ಬಳಿಕ ಸೋಂಕು ವ್ಯಾಪಕವಗಿ ಹರಡುತ್ತಿದ್ದು,ಕಳೆದ 24 ಗಂಟೆಗಳಲ್ಲಿ 2003 ಸೋಂಕಿತರು ಕೊರೊನಾ ವೈರಸ್ನಿಂದ ಸಾವನ್ನಪ್ಪಿದ್ದಾರೆ. ಇಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 11903ಕ್ಕೆ ಏರಿಕೆಯಾಗಿದೆ. ಸಾವಿಗೀಡಾದವರಲ್ಲಿ ಶೇ.70ರಷ್ಟು ಮಂದಿ ಈಗಾಗಲೇ ಬೇರೆ ಬೇರೆ ರೀತಿಯ ಕಾಯಿಲೆಯಿಂದ ಬಳಲುತ್ತಿರುವವರಾಗಿದ್ದರು ಎಂದು ಸಚಿವಾಲಯ ತಿಳಿಸಿದೆ.
ಇದೇ ವೇಳೆ ಬುಧವಾರ 10,974 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 3,54,065ಕ್ಕೆ ಏರಿಕೆಯಾಗಿದೆ. ಸಮಾಧಾನಕರ ಸಂಗತಿಯೆಂದರೆ, ದೇಶದಲ್ಲಿ ಸೋಂಕಿತರ ಜೊತೆಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 3,54,065 ಮಂದಿ ಸೋಂಕರಿತರ ಪೈಕಿ 1,86,935 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಪ್ರಸ್ತುತ ದೇಶದಲ್ಲಿನ್ನೂ 1,55,227 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.