ಬಿಬಿಎಂಪಿ ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆಯಾಗಿರುವುದಕ್ಕೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆಯಾಗಿರುವುದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಿಬಿಎಂಪಿ ಅವರಣದಲ್ಲಿ ಪ್ರತಿಭಟನೆ ನಡೆಸಿದರು. ಗೌತಮ್ ಕುಮಾರ್ ಒಬ್ಬ ಮಾರ್ವಾಡಿ. ಮಾರ್ವಾಡಿ ಕೈಗೆ ಬೆಂಗಳೂರು ಹೋಗುತ್ತಿರುವುದು ದುರದೃಷ್ಟಕರ. ಮಾರ್ವಾಡಿ ಬದಲು ಕನ್ನಡಿಗರನ್ನ ಆಯ್ಕೆ ಮಾಡಬೇಕಿತ್ತು. ಆದರೆ ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದರು.

ಇಂದು ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತ್ಯನಾರಾಯಣ್ ವಿರುದ್ದ 129 ಮತಗಳನ್ನ ಪಡೆದು ಗೌತಮ್ ಕುಮಾರ್ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.