ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಾಟಾಳ್ ವಿಭಿನ್ನ ಪ್ರತಿಭಟನೆ….
ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಾಟಾಳ್ ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ.
ಹೌದು… ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ರಿಂದ ಉರುಳು ಸೇವೆ ಪ್ರತಿಭಟನೆ ಮಾಡಲಾಗುತ್ತಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಉರುಳು ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.
ಉತ್ತರ ಕರ್ನಾಟಕ ಭೀಕರ ನೆರೆಹಾವಳಿಗೆ ತತ್ತರಿಸಿದೆ. ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡದೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಕೂಡಲೆ 50 ಸಾವಿರ ಕೋಟಿ ರೂಪಾಯಿ ಪ್ರವಾಹ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.
ರಸ್ತೆಯಲ್ಲಿ ಉರಳು ಸೇವೆ ಮಾಡುತ್ತಿದ್ದ ವಾಟಾಳ್ ನಾಗರಾಜ್ ಮತ್ತು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.