ಪಶುವೈದ್ಯೆ ಅತ್ಯಾಚಾರಿಗಳನ್ನ ಗುಂಡಿಕ್ಕಿ ಹತ್ಯೆಯನ್ನು ಟೀಕಿಸಿದ ಸಂಸದ ಕಾರ್ತಿ ಚಿದಂಬರಂ…

ತೆಲಂಗಾಣದ ಪಶುವೈದ್ಯೆ ಅತ್ಯಾಚಾರಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಪೊಲೀಸ್ ಕ್ರಮವನ್ನು ದೇಶವೇ ಕೊಂಡಾಡುತ್ತಿರುವಾಗ ಸಂಸದ ಕಾರ್ತಿ ಚಿದಂಬರಂ ಅವರು ಕಟುವಾಗಿ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅತ್ಯಾಚಾರ ಮಾಡುವುದು ಅತ್ಯಂತ ಹೇಯ ಕೃತ್ಯ. ಇದನ್ನು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅತ್ಯಾಚಾರಿಗಳನ್ನು ನಾನು ಬೆಂಬಲಿಸುವುದಿಲ್ಲ, ಆದರೆ ಎನ್ ಕೌಂಟರ್ ಮೂಲಕ ಅವರನ್ನು ಹತ್ಯೆ ಮಾಡುವುದು ಸಮಾಜಕ್ಕೆ ಅಂಟಿದ ಕಳಂಕ. ಅನ್ಯಾಯಕ್ಕೊಳಗಾದವರಿಗೆ ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಬೇಕಾಗಿರುವುದು ನಿಜವಾದರೂ ಈ ರೀತಿ (ಎನ್ ಕೌಂಟರ್) ಬೇಕಾಗಿಲ್ಲ. ಇದು ಸರಿಯಾದ ಮಾರ್ಗ ಅಲ್ಲ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ಅಭಿಪ್ರಾಯಕ್ಕೆ ಟ್ವಿಟ್ಟರ್ ನಲ್ಲಿ ವ್ಯತಿರಿಕ್ತ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

“ಓರ್ವ ರಾಜಕಾರಣಿಯಾಗಿ ನೀವು ಹೇಳುತ್ತಿರುವುದು ಎಷ್ಟು ಸರಿ? ನಿಮ್ಮ ಕುಟುಂಬದವರಿಗೆ ಈ ರೀತಿ ಆಗಿದ್ದರೆ ಸುಮ್ಮನಿರುತ್ತಿದ್ದಿರಾ? ಪೊಲೀಸರು ಮಾಡಿದ ಕಾರ್ಯ ಸರಿಯಾಗಿದೆ,” ಎಂದು ಕೆಲವರು ಟ್ವೀಟ್​ಗೆ ಉತ್ತರಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights