ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಮೂಲ್ಯಗೆ ತಕ್ಕ ಪಾಠ ಕಲಿಸಿ…!

ಬೆಂಗಳೂರಿನಲ್ಲಿ ಪಾಕಿಸ್ತಾನದ ಪರ ಅಮೂಲ್ಯ ಘೋಷಣೆ ಕೂಗಿದ ಕೇಸ್ ಕ್ಕೆ ಸಂಬಂಧಪಟ್ಟಂತೆ ಆರೋಪಿ ಅಮೂಲ್ಯ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಕಾರ್ಯಕ್ರಮದಲ್ಲಿ ಅಮೂಲ್ಯ ಎಂಬ ಯುವತಿ ಪಾಕ್ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಆಕೆಯನ್ನು ಬಂಧಿಸಿ  14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಪ್ಪ ತಾಲೂಕಿನ ಶಿವಪುರ ಗ್ರಾಮದಲ್ಲಿರುವ ಅಮೂಲ್ಯ ಮನೆ ಮೇಲೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಅಮೂಲ್ಯ ತಂದೆ ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಐಪಿಸಿ ಸೆಕ್ಷನ್ 143, 144, 148, 447, 427, 504, 506 ರಡಿ ಪ್ರಕರಣ ದಾಖಲಿಸಲಾಗಿದೆ.
ಜೊತೆಗೆ ಸಿಎಂ ಬಿಎಸ್ ಯಡಿಯೂರಪ್ಪ ಇದನ್ನ ಖಂಡಿಸಿದ್ದಾರೆ. ಇಂತಹ ವರ್ತನೆಯನ್ನು ನಾನು ಖಂಡಿಸುತ್ತೇನೆ. ಈ ರೀತಿಯಲ್ಲಿ ಜನರು ವರ್ತಿಸಲು ಬಯಸಿದ್ದರೆ ಅದನ್ನು ಅವರು ಎಲ್ಲಿ ಬೇಕಾದರೂ ಮಾಡಬಹುದು. ಈ ನಿರ್ದಿಷ್ಟ ವೇದಿಕೆಯನ್ನೇ ಏಕೆ ಅವರು ಬಳಸಿಕೊಂಡರು ಎಂದು ಫ್ರೀಡಂ ಪಾರ್ಕ್‌ನ ಕಾರ್ಯಕ್ರಮದಲ್ಲಿ ಹಾಜರಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅಮೂಲ್ಯಳ ಘೋಷಣೆಯನ್ನು ಖಂಡಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights