ಪಾಕಿಸ್ತಾನದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಆಫ್ರಿದಿಗೆ ಕೊರೋನಾ ವೈರಸ್

ಪಾಕಿಸ್ತಾನದ  ಮಾಜಿ ಕ್ರಿಕೆಟಿಗ, ಸ್ಟಾರ್ ಆಲ್ರೌಂಡರ್ ಶಾಹಿದ್ ಅಫ್ರಿದಿ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೂರು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಬಳಲುತ್ತಿದ್ದ ಅಫ್ರಿದಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದರು. ಪರೀಕ್ಷೆ ವೇಳೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಅಫ್ರಿದಿ ಅವರೇ ಟ್ವೀಟ್ ಮಾಡಿದ್ದು, ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಪ್ರಾರ್ಥನೆ ನನ್ನ ಮೇಲಿರಲಿ ಎಂದು ಹೇಳಿದ್ದಾರೆ.

40 ವರ್ಷ ಪ್ರಾಯದ ಅಫ್ರಿದಿ ಇತ್ತೀಚೆಗಷ್ಟೆ ತಮಗೆ ಐದನೇ ಹೆಣ್ಣು ಮಗು ಜನಿಸಿರುವ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು.

ಪಾಕಿಸ್ತಾನದಲ್ಲ ಕೊರೊನಾ ವೈರಸ್ ಪ್ರಕರಣಗಳು ತೀವ್ರವಾಗಿ ಏರಿಕೆ ಕಂಡಿದೆ. ಹೀಗಾಗಿ ತೀವ್ರ ಮೇಲ್ವಿಚಾರಣೆಯಲ್ಲಿ ಪೂರ್ವ ಸಿದ್ಧತೆಗಳನ್ನು ನಡೆಸಲು ಉದ್ದೇಶಿಸಲಾಗಿದ್ದ ಕ್ರಿಕೆಟ್ ಶಿಬಿರ ಕೂಡ ರದ್ದಾಗಿದೆ. ವಾರದ ಅವಧಿಯಲ್ಲಿ ಪಾಕಿಸ್ತಾನದಲ್ಲಿ ಕೋವಿಡ್ 19 ಪ್ರಕರಣ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights