ಪಿ ಚಿದಂಬರಂ ಬಂಧನ : ‘ಕಾಂಗ್ರೆಸ್, ಬಿಜೆಪಿಯಿಂದ ಅಧಿಕಾರ ದುರುಪಯೋಗ’ ಆರೋಪ
ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿರುವ ಕರ್ನಾಟಕ ಕಾಂಗ್ರೆಸ್, ಬಿಜೆಪಿಯಿಂದ ಅಧಿಕಾರ ದುರುಪಯೋಗ ಆಗುತ್ತಿದೆ ಎಂದು ಕಿಡಿಕಾರಿದೆ.
ಸಿಬಿಐ ಮತ್ತು ಇಡಿಯನ್ನು ಬಿಜೆಪಿಯ ಮುಂಚೂಣಿಯ ಘಟಕಗಳಾಗಿ ಬದಲಾಗಿದ್ದು, ರಾಜಕೀಯವಾಗಿ ಮಣಿಸಲು ಕಾಂಗ್ರಸ್ ನ ಹಿರಿಯ ನಾಯಕ ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಟ್ವೀಟ್ ಮಾಡಿದೆ.
ಬಿಜೆಪಿ ಸರಕಾರ ಅತಿರೇಕದಿಂದ ವರ್ತಿಸುತ್ತಿದ್ದು, ಅಧಿಕಾರದ ಸಂಪೂರ್ಣ ದುರುಪಯೋಗ ಮಾಡುಕೊಳ್ಳುತ್ತಿದೆ. ಇದು ಖಂಡನೀಯ ಎಂದು ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದೆ.
ಮಾಜಿ ಕೇಂದ್ರ ಗೃಹ ಸಚಿವ ಮತ್ತು ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬುಧವಾರ ರಾತ್ರಿ ಬಂಧಿಸಿತ್ತು.