ಪೊಲೀಸರ ಕಾರ್ಯಾಚರಣೆಗೆ ಸಿಕ್ಕಿಬಿದ್ದ ಇಬ್ಬರು ಬೈಕ್ ಕಳ್ಳರು…!

ಮೈಸೂರಿನ ವಿಜಯನಗರ ಪೊಲೀಸರ ಕಾರ್ಯಾಚರಣೆಯಲ್ಲಿ ಖದೀಮ ಕಳ್ಳರು ಸಿಕ್ಕಿಬಿದ್ದಿದ್ದಾರೆ.

ಸ್ಟ್ಯಾನ್ಲಿ (24) ಧನುಷ್ (24) ಎನ್ನುವ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 21.5 ಲಕ್ಷ ಮೌಲ್ಯದ 12 ಬೈಕ್‌ಗಳ ವಶಪಡಿಸಿಕೊಳ್ಳಲಾಗಿದೆ. ಮೈಸೂರಿನ ಜಯಲಕ್ಷ್ಮಿ ಪುರಂ, ವಿಜಯನಗರ,ಸರಸ್ವತಿಪುರಂ,ಕೊಡಗಿನ ಕುಶಾಲನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಕಳ್ಳರು ಇವರು. ಐಶಾರಾಮಿ ಬೈಕ್‌ಗಳನ್ನು ಟಾರ್ಗೆಟ್ ಮಾಡಿ ಕದಿಯುತ್ತಿದ್ದರು.

ಈಗಾಗಲೇ ಕೆಟಿಎಂ,ಅಪಾಚೆ,ರಾಯಲ್ ಎನ್‌ಫೀಲ್ಡ್ ಬೈಕ್ ಕಳ್ಳತನ ಮಾಡಿದ್ದರು. ಇವರ ಪತ್ತೆಗೆ ಬಲೆ ಬೀಸಿದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಹೂಟಗಳ್ಳಿ ಸಿಗ್ನಲ್ ಬಳಿ ಸಿಕ್ಕಿ ಬಿದ್ದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights