ಪ್ರವಾಸಕ್ಕೆ ಬಂದ ಇಬ್ಬರು ವಿದ್ಯಾರ್ಥಿಗಳು ಕಾವೇರಿ ನದಿ ನೀರುಪಾಲು….!
ಪ್ರವಾಸಕ್ಕೆ ಬಂದ ಇಬ್ಬರು ವಿಧ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಅಲ್ಫ್ರೆಡ್ ವಿಜಯ್ (16) ಹಾಗೂ ಹೇಮಂತ್(17) ಮೃತ ದುರ್ದೈವಿಗಳು. ಇವರು ಟಿ. ನರಸೀಪುರ ತಲಕಾಡು ಬಳಿಯ ನಿಸರ್ಗಧಾಮಕ್ಕೆ ಪ್ರವಾಸಕ್ಕೆ ಬಂದಿದ್ದರು. ನದಿಯಲ್ಲಿ ಈಜಾಡಲು ತೆರಳಿದ ವೇಳೆ ಈ ಘಟನೆ ನಡೆದಿದೆ.
ಬೆಂಗಳೂರಿನ ಹೆಬ್ಬಾಳದ ಪರಿಕ್ರಮ ಹ್ಯುಮಾನಿಟಿ ಫೌಂಡೇಶನ್ ಕಾಲೇಜಿನ ಪ್ರಥಮ ಪಿಯುಸಿಯ 45ವಿದ್ಯಾರ್ಥಿಗಳು ನಾಲ್ವರು ಉಪನ್ಯಾಸಕರೊಂದಿಗೆ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಈ ಪೈಕಿ ಐವರು ವಿದ್ಯಾರ್ಥಿಗಳು ಸ್ನಾನ ಮಾಡಲು ನದಿಗೆ ಇಳಿದಿದ್ದರು.
ಈ ವೇಳೆ ಐವರ ಪೈಕಿ ಮೂವರನ್ನು ಅಂಬಿಗನ ನೆರವಿನಿಂದ ರಕ್ಷಣೆ ಮಾಡಲಾಗಿದೆ. ಆದರೆ ದುರಾದೃಷ್ಟವಶಾತ್ ಇನ್ನಿಬ್ಬರು ನೀರುಪಾಲಾಗಿ ಪ್ರಾಣ ಬಿಟ್ಟಿದ್ದಾರೆ. ತಲಕಾಡು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.