ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಬಯಲು ಸೀಮೆ ಭಾಗದ ಜೀವನಾಡಿ ಅಯ್ಯನಕೆರೆ….
ಮಲೆನಾಡಿನ ಜಲಪ್ರಳಯಕ್ಕೆ ಮಲೆನಾಡಿಗರ ಬದುಕು ಮೂರಾಬಟ್ಟೆಯಾದ್ರೆ, ಬಯಲುಸೀಮೆ ಜನರಿಗೆ ಬದುಕುವ ಚೈತನ್ಯ ತಂದಿದೆ. ಅಲ್ಲಿ ಅಲ್ಲೋಲ-ಕಲ್ಲೋಲ, ಇಲ್ಲಿ ಹರ್ಷೋದ್ಘಾರ. ಅಲ್ಲಿ ನೀರಿಂದಲೇ ಬದುಕು ಬೀದಿಗೆ ಬಂತು. ಇಲ್ಲಿ ಅದೇ ನೀರು ಬದುಕುವ ಆಸೆ ತಂತು. ಮೂರು ಹವಾಗುಣ ಹೊಂದಿರೋ ಕಾಫಿನಾಡಲ್ಲಿ ಒಂದೊಂದು ಭಾಗದ್ದು ಒಂದೊಂದು ಗೋಳು. ಶಾಶ್ವತ ಬರಗಾಲಕ್ಕೆ ತುತ್ತಾಗಿದ್ದ ಆ ತಾಲೂಕಿನ ಜನಕ್ಕೀಗ ಆ ಕೆರೆ ತುಂಬಿರೋದು ಮರಳುಗಾಡಲ್ಲಿ ಓಯಾಸೀಸ್ ಸಿಕ್ಕಂತಾಗಿದೆ. ಹಾಗಾದ್ರೆ, ಆ ಕೆರೆ ಯಾವ್ದು ಅಂತೀರಾ… ಈ ಸ್ಟೋರಿ ಓದಿ…….
ನೀರಲ್ಲಿ ಕಬ್ಬಡ್ಡಿ ಆಡ್ತಿರೋ ಮಕ್ಕಳು. ನಾನಾ-ನೀನಾ ಅಂತ ಸರದಿ ಸಾಲಲ್ಲಿ ಡೈ ಹೊಡೆಯುತ್ತಿರೋ ಯುವಕರು. ಸುತ್ತಲಿನ ಹಸಿರ ಗುಡ್ಡಗಳ ರಿಫ್ಲ್ಯಾಕ್ಟ್ ನೀರಿನ ಬಣ್ಣವನ್ನೇ ಬಣ್ಣವನ್ನೇ ಬದಲಿಸಿರೋದು. ಹೌದು… ಇದು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಐತಿಹಾಸಿಕ ಅಯ್ಯನಕೆರೆ. 100 ಎಕರೆಗೂ ಹೆಚ್ಚಿನ ವಿಸ್ತಿರ್ಣವುಳ್ಳ ಕೆರೆ. ಅಂದಾಜು 5 ರಿಂದ 6 ಸಾವಿರ ಹೆಕ್ಟೇರ್ ನೀರಾವರಿ ಕಲ್ಪಿಸೋ ಜೀವನಾಡಿ. ಮಲೆನಾಡಿನ ಮಳೆ ಅಬ್ಬರಕ್ಕೆ ಕಳೆದೊಂದು ವಾರದಿಂದ ಆಕರ್ಷಣೆಯ ಕೇಂದ್ರ ಬಿಂದುವಾಗಿ ಪ್ರವಾಸಿ ತಾಣವಾಗಿದೆ. ಏಳು ಗಡ್ಡಗಳ ಮಧ್ಯೆ ಇರೋ ಈ ಕೆರೆಯ ಸೌಂದರ್ಯಕ್ಕೆ ಕೆರೆಯ ಸಾಕ್ಷಿಯಂತಾಗಿದೆ. ಹಸಿರ ನೀರಿನ ಸೌಂದರ್ಯವನ್ನ ಸವಿಯಲು ಪ್ರವಾಸಿಗರ ದಂಡೇ ಹರಿದು ಬರ್ತಿದ್ದು. ಇಲ್ಲಿ ಬೋಟಿಂಗ್ ವ್ಯವಸ್ಥೆಗೆ ಸರ್ಕಾರ ಚಿಂತನೆ ನಡೆಸಿದೆ. ಈ ಕೆರೆ ತುಂಬಿರೋದು ಪ್ರವಾಸಿಗರಿಗೆ ಮನೋರಂಜನೆ ನೀಡ್ತಿದ್ರೆ, ಹಳ್ಳಿಗರಿಗೆ ನಿಟ್ಟುಸಿರು ಬಿಡುವಂತಾಗಿದೆ.

ಚಂದ್ರದ್ರೋಣ ಪರ್ವತ ಶ್ರೇಣಿಗೆ ಭೇಟಿ ನೀಡೋ ಪ್ರವಾಸಿಗ್ರು ಇಲ್ಲಿಗೂ ಭೇಟಿ ನೀಡಿ, ಇಲ್ಲಿನ ಸೌಂದರ್ಯವನ್ನ ಸವಿಯುತ್ತಾರೆ. ಅದ್ರಲ್ಲೂ ಇಲ್ಲಿ ಯುವಕ-ಯುವತಿಯರು, ಪ್ರೇಮಿಗಳ ಸಂಖ್ಯೆಯೇ ಹೆಚ್ಚು. ಇಲ್ಲಿಗೆ ಆಗಮಿಸೋ ಪ್ರವಾಸಿಗರು ದಿನವಿಡೀ ಕೆರೆ ಬಳಿ ಕುಣಿದು ಕುಪ್ಪಳಿಸ್ತಾರೆ. ಮತ್ತೊಂದೆಡೆ ಸಾಹಸಿ ಈಜುಪಟುಗಳು ಮನಸ್ಸಿಗೆ ತೋಚಿದಂತೆಲ್ಲಾ ಬಿದ್ದು ತಮ್ಮ ಆಸೆ ಪೂರೈಸಿಕೊಳ್ತಿದ್ದಾರೆ. ಇಲ್ಲಿ ಹರಿಯೋ ನೀರು ಕಡೂರಿನ ಬಹುತೇಕ ಭಾಗಕ್ಕೆ ಕುಡಿಯೋ ನೀರಿನ ಸೌಲಭ್ಯ ಕಲ್ಪಿಸಿದೆ. ಇಲ್ಲಿನ ಊರುಕಾಲುವೆ, ಬಸವನಕಾಲುವೆ, ಕಡೇ ಕಾಲುವೆ, ಗೌರಿ ಹಳ್ಳಿ ನಾಲ್ಕು ಕಾಲುವೆಗಳಾಗಿ ಹರಿಯೋ ನೀರು ಸಾವಿರಾರು ಜನರಿಗೆ ಬದುಕುವ ಚೈತನ್ಯ ತಂದಿದೆ. ಆದ್ರೀಗ, ಸರ್ಕಾರ ಈ ಕೆರೆಗೆ ಬೋಟಿಂಗ್ ವ್ಯವಸ್ಥೆಗೆ ಮುಂದಾಗಿರೋದ್ರಿಂದ ವ್ಯವಹಾರದ ದೃಷ್ಠಿಯಿಂದ ಸ್ಥಳಿಯರಿಗೆ ಹಾಗೂ ಪ್ರವಾಸಿಗರಿಗೆ ಮತ್ತಷ್ಟು ಖುಷಿ ತಂದಿದೆ.


ಒಟ್ಟಾರೆ, ಮಲೆನಾಡಿನ ಮಳೆ ಒಂದೆಡೆ ಖುಷಿ ತಂದ್ರೆ, ಮತ್ತೊಂದೆಡೆ ನೋವು ತರಿಸಿದೆ. ಮಲೆನಾಡಿಗರು ನಮ್ಗೆ ಮಳೆಯೇ ಬೇಡ ಅಂತಿದ್ರೆ ಕಡೂರಿಗರು ಮಾತ್ರ ಇಂದಿಗೂ ಉಯ್ಯೋ… ಉಯ್ಯೋ… ಮಳೆರಾಯ ಅನ್ನೋದ್ನ ಬಿಟ್ಟಿಲ್ಲ. ಆದ್ರೆ, ಪ್ರವಾಸಿ ತಾಣವಾಗಿ ಈ ನಯನ ಮನೋಹರ ಜಾಗ ಪ್ರವಾಸಿಗರನ್ನ ಕೈ ಬಿಸಿ ಕರೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಈ ಕೆರೆಯ ಸೌಂದರ್ಯ ರಾಶಿ ಕೂಡ ಕಣ್ಣಲ್ಲಿ ಕಟ್ಟುವಂತಿದೆ. ಇಲ್ಲಿ ಬೋಟಿಂಗ್ ವ್ಯವಸ್ಥೆಯಾದ್ರೆ ಸ್ಥಳಿಯ ಸಾವಿರಾರು ಜನರಿಗೆ ಉದ್ಯೋಗ ಸಿಗೋದ್ರಲ್ಲಿ ನೋ ಡೌಟ್………

