ಪ್ರವಾಹದ ನೀರಿನಲ್ಲಿ ಕೊಚ್ಚಿ ಬಂದ ಅಪರಿಚಿತ ಯುವಕನ ಶವ….!
ವಾಹದ ನೀರಿನಲ್ಲಿ ಕೊಚ್ಚಿ ಬಂದ ಅಪರಿಚಿತ ಯುವಕನ ಶವವೊಂದು ಪತ್ತೆಯಾಗಿದೆ. ಮಂಡ್ಯದ ಶ್ರೀರಂಗಪಟ್ಟಣದ ಪಶ್ವಿಮವಾಹಿನಿ ಬಳಿಯ ಕಾವೇರಿ ನದಿಯಲ್ಲಿ ಶವ ಪತ್ತೆಯಾಗಿದೆ.
ಸುಮಾರು ೩೦ ವರ್ಷ ವಯಸ್ಸಿನ ಅಪರಿಚಿತ ಯುವಕ ಎನ್ನುವುದು ಮಾತ್ರ ಗುರುತಿಸಲಾಗಿದೆ. ಕಾವೇರಿ ಪ್ರವಾಹದಲ್ಲಿ ಯುವಕ ಕೊಚ್ಚಿ ಬಂದಿರುವ ಶಂಕೆ ವ್ಯಕ್ತಪಡಿಸಿಲಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ತುಂಬಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಈ ಶವ ತೇಲಾಡುತ್ತಿರುವದನ್ನ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಅಪರಿಚಿತ ಶವದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.