ಬಸ್ಸು , ವಾಹನಗಳಿಗೆ ಮುಸ್ಲಿಂ ಯುವಕನಿಂದ ಆಯುಧ ಪೂಜೆ….

ರಾಜ್ಯಾದ್ಯಂತ ದಸರಾ, ಆಯುಧ ಪೂಜೆಯ ಸಂಭ್ರಮ. ಹಿಂದೂಗಳಿಗೆ ಶ್ರೇಷ್ಠವಾದ ಹಬ್ಬ. ಎಲ್ಲರೂ ತಮ್ಮ-ತಮ್ಮ ವಾಹನಗಳಿಗೆ ಅಲಂಕರಿಸಿ, ಪೂಜೆ ಮಾಡಿ ಓಡಾಡಿ ಸಂಭ್ರಮಿಸ್ತಾರೆ.

ಆದ್ರೆ, ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಯುವಕನೂ ಕೂಡ ತನ್ನ ಬಸ್ಸುಗಳು ಹಾಗೂ ವಾಹನಗಳಿಗೆ ಪೂಜೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಹಿಂದೂಗಳಂತೆ ತಾನೂ ಹಬ್ಬ ಮಾಡಿ, ಸಿಹಿ ಹಂಚಿ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾನೆ. ಚಿಕ್ಕಮಗಳೂರಿನ ಎಸ್.ಎಂ.ಎಸ್. ಬಸ್ ಮಾಲೀಕನಾದ ಸಿರಾಜ್, ಹಿಂದೂಗಳು ನಾಚುವಂತೆ ಆಯುಧ ಪೂಜೆ ಆಚರಿಸಿದ್ದಾನೆ.

ತಮ್ಮ ಆರು ಬಸ್ಸುಗಳನ್ನು ಶುಚಿ ಮಾಡಿ, ಬಸ್ಸನ್ನ ಚೆಂಡುಹೂ, ಬಲೂನ್, ಬಾಳೆದಿಂಡು ಹಾಗೂ ಮಾವಿನ ತೋರಣದಿಂದ ಸಿಂಗರಿಸಿ ಅರಿಶಿನ-ಕುಂಕುಮ, ವಿಭೂತಿ ಬಳಿದು ಆರತಿ ಮಾಡಿ ಪೂಜೆ ಮಾಡಿದ್ದಾರೆ. ತನ್ನೆಲ್ಲಾ ಬಸ್ಸುಗಳನ್ನ ಅಲಂಕರಿಸಿ ಹಿಂದೂ-ಮುಸ್ಲಿಂ ಎಲ್ಲರನ್ನೂ ಕರೆಸಿ ಪೂಜೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಎಲ್ಲರಿಗೂ ಸಿಹಿ ಹಂಚಿ ಆಯುಧ ಪೂಜೆಯ ಶುಭಾಷಯ ವಿನಿಮಯ ಮಾಡ್ಕೊಂಡು, ಹಿಂದೂ-ಮುಸ್ಲಿಂ ಬಾಯಿ-ಬಾಯಿ ಎಂದೂ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights