ಬಸ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿ : 8 ಮಂದಿ ಸ್ಥಳದಲ್ಲೇ ಸಾವು…!
ಬಸ್ ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, 8 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ನಡೆದಿದೆ.
ಸಂತೋಷಪುರದಲ್ಲಿ ಬಸ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿದ್ದು 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ದುರ್ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.