ಬಿಜೆಪಿಯವರ ಬಳಿ ದುಡ್ಡಿದೆ : ಸಿಟಿ ರವಿ ಮೊದಲು ಬಿಜೆಪಿ ಬಿಟ್ಟು ಬರುವವರನ್ನು ತಡೆಯಲಿ
ವಿಜಯಪುರದಲ್ಲಿ ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಸುದ್ದಿಗೋಷ್ಠಿ ಮಾಡಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕೈ ಜೋಡಿಸುವ ಕುರಿತು ಕಾಂಗ್ರೆಸ್ ಇನ್ನೂ ನಿರ್ಧಾರ ಆಗಿಲ್ಲ. ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ 15 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಲ್ಲ. ದೇವೇಗೌಡರು ಯಾಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. 12 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೇನೆ. ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿರುವ ಶಂಕೆ ಇದೆ. ಸಮ್ನಿಶ್ರ ಸರಕಾರ ರಚಿಸುವಾಗ ಖರ್ಗೆಗೆ ಸಿಎಂ ಸ್ಥಾನ ನೀಡಲು ತಾವು ವಿರೋಧಿಸಿಲ್ಲ. ದೇವೇಗೌಡರು ಯಾಕೆ ಹೇಳಿದ್ದಾರೆ ಗೊತ್ತಿಲ್ಲ. ಸಮ್ಮಿಶ್ರ ಸರಕಾರ ಒಪ್ಪಂದ ಮಾಡುವಾಗ ನಾನು ಆ ಸಭೆಯಲ್ಲಿ ಇರಲಿಲ್ಲ ಎಂದರು.
ಹೈಕಮಾಂಡ ಸೂಚನೆ ಹಿನ್ನೆಲೆ ಜೆಡಿಎಸ್ ಜೊತೆ ಸರಕಾರ ರಚನೆಗೆ ಒಪ್ಪಿದೆ. ಉಪಚುನಾವಣೆ ವಿಚಾರದಲ್ಲಿ ಉಹಾಪೋಹ ಜರ್ನಲಿಸಂ ಜಾಸ್ತಿಯಾಗಿದೆ. ಬಾಕಿ 7 ಕ್ಷೇತ್ರಗಳಿಗೆ ಶೀಘ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ನಾವು ಆಪರೇಶನ್ ಹಸ್ತ ಮಾಡಲ್ಲ.
ಸಿಟಿ ರವಿ ಮೊದಲು ಬಿಜೆಪಿ ಬಿಟ್ಟು ಬರುವವರನ್ನು ತಡೆಯಲಿ. ಬಿಜೆಪಿಯವರ ಬಳಿ ದುಡ್ಡಿದೆ. ಅನೈತಿಕ ರಾಜಕೀಯ ಮಾಡುವುದು ಬಿಜೆಪಿಯ ಕೆಲಸ. ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಭೆಯಲ್ಲಿ ಯಾವುದೇ ಮುಖಂಡರೊಂದಿಗೆ ಮನಸ್ತಾಪ ಉಂಟಾಗಿಲ್ಲ. ಮಾಧ್ಯಮಗಳಲ್ಲಿ ಬಂದ ಸುದ್ದಿ ಶುದ್ಧ ಸುಳ್ಳು ಎಂದು ವಿಜಯಪುರದಲ್ಲಿ ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಹೇಳಿದ್ದಾರೆ.