ಬಿಜೆಪಿ ನಾಯಕರ ಭಾವಚಿತ್ರ ಇರುವ ಸೀರೆ ವಶ ಪ್ರಕರಣ- ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ದೂರು
ಯೋಗೇಶ್ವರ್ ಹಾಗೂ ಬಿಜೆಪಿ ನಾಯಕರ ಭಾವಚಿತ್ರ ಇರುವ ಸೀರೆ ಪತ್ತೆಯಾಗಿದ್ದು ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.
ಬಿಜೆಪಿ ವಿರುದ್ಧ ಎಸಿ ಡಾ.ವೆಂಕಟರಾಜುಗೆ ಕಾಂಗ್ರೆಸ್ ದೂರು ನೀಡಿದೆ. ದಾಖಲೆಗಳ ಸಮೇತ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೂರು ನೀಡಿದ ಕಾಂಗ್ರೆಸ್ ನಿಯೋಗ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಬಿಜೆಪಿಯಿಂದ ಹುಣಸೂರು ಉಪ ಚುನಾವಣೆಗಾಗಿ ಹಂಚಲು ತಂದಿದ್ದ 30,000 ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೀರೆ ಚೀಲಗಳ ಮೇಲೆ ಯೋಗೇಶ್ವರ್ ಹಾಗೂ ಬಿಜೆಪಿ ನಾಯಕರ ಫೋಟೊಗಳಿವೆ. ಆದರೆ ವಿಜಯನಗರದ ಗಂಗಣ್ಣ ಎಂಬುವವರ ಮೇಲೆ ಎಫ್ ಐಆರ್ ದಾಖಲಾಗಿದೆ.
ಅಧಿಕಾರಿಗಳು ಸಹ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಚುನಾವಣಾ ಆಯೋಗ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸುವ ಬಗ್ಗೆ ಅನುಮಾನವಿದೆ. ಹೆಚ್.ವಿಶ್ವನಾಥ್ ಹುಣಸೂರನ್ನು ಜಿಲ್ಲೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಇದೂ ಕೂಡಾ ನೀತಿ ಸಂಹಿತೆ ಉಲ್ಲಂಘಟನೆ. ಈ ವಿಚಾರವಾಗಿ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.