ಬಿಜೆಪಿ ಸಂಸ್ಥಾಪನಾ ದಿನಾಚರಣೆಗೆ ಮೋದಿಯವರು ಕೊರೊನಾವನ್ನು ದುರುಪಯೋಗಪಡಿಸಿಕೊಂಡರಾ?

ಭಾನುವಾರ (ಇಂದು) ರಾತ್ರಿ 9 ಗಂಟೆಗೆ ಮನೆಯ ವಿದ್ಯುತ್ ಲೈಟ್‌ಗಳನ್ನು ಆರಿಸಿ 9 ನಿಮಿಷ ಬಾಲ್ಕನಿಗಳಲ್ಲಿ ನಿಂತು ಕ್ಯಾಂಡಲ್‌ ಹುರಿಸುವಂತೆ ಪ್ರಧಾನಿ ಮೋದಿ ಕರೆ ನೀಡಿರುವುದಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೂಡ ಕೇಂದ್ರ ಸರ್ಕಾರ ಮತ್ತು ಮೋದಿ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಹರಿಹಾಯ್ದಿದ್ದಾರೆ. ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿ ಇರುವಾಗ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ತರದ ತೋರಿಕೆಯ ಸಂಭ್ರಮ ಬೇಕೇ ಎಂದು ಪ್ರಶ್ನಿಸಿದ್ದಾರೆ.

ುಏಪ್ರಿಲ್ 6 1980 ಬಿಜೆಪಿ ಸಂಸ್ಥಾಪನಾ ದಿನ. ಇಂದಿಗೆ ಬಿಜೆಪಿಗೆ 40 ವರ್ಷ ತುಂಬುತ್ತದೆ. ಬಿಜೆಪಿಯ ಸಂಸ್ಥಾಪನಾ ದಿನ ಆಚರಿಸಲು ಕೊರೋನ ಸಂಕಷ್ಟವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡಿರಬಹುದು ಎಂಬ ಸಂಶಯ ಕಾಡುತ್ತದೆ ಎಂದು ಹೆಚ್ ಡಿ ಕುಮಾರಸ್ವಾಮಿ ಸಂದೇಹ ವ್ಯಕ್ತಪಡಿಸಿದ್ದಾರೆ.

ಜಗತ್ತು ಕೊರೋನಾ ಮಹಾಮಾರಿಯಿಂದ ತತ್ತರಿಸುವ ಸಂದರ್ಭದಲ್ಲಿ ಇಂತಹ ರಹಸ್ಯ ಕಾರ್ಯಸೂಚಿ ಅರ್ಥಾತ್ ಪರದೆ ಹಿಂದಿನ ಸತ್ಯ ಮರೆಮಾಚಿ ಅಕಾಲಿಕ ದೀಪಾವಳಿ ಮಾಡಬೇಕೆ?ದೇಶದ ಸಂಕಟವನ್ನು ಬಗೆ ಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ಪ್ರಧಾನಿ ಏಪ್ರಿಲ್ 5 ನ್ನೇ ಆಯ್ದುಕೊಂಡದ್ದಕ್ಕೆ ಬೇರೆ ಏನು ವೈಜ್ಞಾನಿಕ, ವೈಚಾರಿಕ ಕಾರಣ ಎಂಬುದನ್ನು ಸ್ಪಷ್ಟ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights