ಬಿಸಿಸಿಐನ 39ನೇ ಅಧ್ಯಕ್ಷರಾಗಿ ಬುಧವಾರ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ವಹಿಸಿಕೊಂಡಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಜವಾಬ್ದಾರಿಯನ್ನು ಮುಂದಿನ 11 ತಿಂಗಳವರೆಗೆ ಸೌರವ್ ಗಂಗೂಲಿಯವರಿಗೆ ವಹಿಸುವುದೆಂದುಇತ್ತೀಚಿನ ಬಿಸಿಸಿಐ ಸಾಮಾನ್ಯ ಮಂಡಳಿ ಸಭೆಯಲ್ಲಿ ನೀಡಲಾಗಿದೆ.

ಈ ಮೂಲಕ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಡಳಿತಾಧಿಕಾರಿಗಳ ಸಮಿತಿಯ 33 ತಿಂಗಳ ಆಳ್ವಿಕೆ ಇಂದಿಗೆ ಅಂತ್ಯವಾಗಿದೆ. ಈ ಮೂಲಕ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಎಂದು ಕಳೆದ ವಾರದ ತೆಗೆದುಕೊಂಡಿದ್ದ ತೀರ್ಮಾನಕ್ಕೆಅಧಿಕೃತ ಮುದ್ರೆ ಬಿದ್ದಿದೆ.