ಭಾರತದಲ್ಲಿ 7,964 ಹೊಸ ಕೊರೊನಾ ಕೇಸ್ : ಇಂದು ಲಾಕ್‌ಡೌನ್ ವಿಸ್ತರಣೆಯ ನಿರ್ಧಾರ

ಭಾರತದಲ್ಲಿ 7,964 ಹೊಸ ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ 265 ಸಾವು ಸಂಭವಿಸಿದ್ದು ಇಂದು ಲಾಕ್‌ಡೌನ್ ವಿಸ್ತರಣೆಯ ನಿರ್ಧಾರ ತೆಗೆದುಕೊಳ್ಳಲಾಗುವುದು.

ಹೌದು..ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವಿಸ್ತರಣೆ ಕುರಿತು ಎಲ್ಲ ಮುಖ್ಯಮಂತ್ರಿಗಳ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಜೊತೆಗೆ ಮೇ 31 ರ ನಂತರ ರಾಷ್ಟ್ರವ್ಯಾಪಿ ಲಾಕ್‌ಡೌನ್ ಬಗ್ಗೆ ಅಧಿಕಾರಿಗಳು ತಿಳಿಸಲಿದ್ದಾರೆ ಎನ್ನಲಾಗುತ್ತಿದೆ.

ಸಭೆಯಲ್ಲಿ, ಶಾ ಅವರು ತಮ್ಮ ದೂರವಾಣಿ ಸಂಭಾಷಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಂದ ಪಡೆದ ಸಲಹೆಗಳು ಮತ್ತು ಪ್ರತಿಕ್ರಿಯೆಗಳ ಬಗ್ಗೆ ಮೋದಿಗೆ ವಿವರಿಸಿದರು ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊರೋನವೈರಸ್ ಹರಡುವಿಕೆಯನ್ನು ತಪ್ಪಿಸುವ ಉದ್ದೇಶದಿಂದ ರಾಷ್ಟ್ರವ್ಯಾಪಿ ನಿರ್ಬಂಧಗಳನ್ನು ಮಾರ್ಚ್ 24 ರಂದು 21 ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಆದರೆ ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವ ಪರಿಣಾಮ ಲಾಕ್ ಡೌನ್ ನನ್ನು ಇಲ್ಲಿವರೆಗೆಗೂ ಹಂತ ಹಂತವಾಗಿ ಮುಂದುವರೆಸಿಕೊಂಡು ಬರಲಾಗಿದೆ. ಈ ವರೆಗೆ ದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಈ ಬಾರಿ ಲಾಕ್ ಡೌನ್ 5.0 ಜಾರಿಗೆ ಬರಲಿದ್ದು, ಇದರಲ್ಲೂ ಕೆಲ ಸಡಿಲಿಕೆಯಾಗುವ ಸಾಧ್ಯತೆ ಇದೆ.

ಭಾರತವು ಕಳೆದ 24 ಗಂಟೆಗಳಲ್ಲಿ 7,964 ಹೊಸ ಸಕಾರಾತ್ಮಕ ಪ್ರಕರಣಗಳು ಮತ್ತು 265 ಸಾವುಗಳನ್ನು ದಾಖಲಾಗಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 1,73,763. 86422 ಸಕ್ರಿಯ ಪ್ರಕರಣಗಳು, 82370 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 4971 ಸಾವುಗಳು ಸಂಭವಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights