ಭಾರತ ಮೂರು ವಾರ ಸಂಪೂರ್ಣ ಲಾಕ್‌ಡೌನ್‌: ಇಂದು ಮಧ್ಯರಾತ್ರಿಯಿಂದಲೇ ಜಾರಿ

ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ಧೇಶಿಸಿ ಮಾತನಾಡಿದ್ದು ಮೂರು ವಾರ ಭಾರತ ಸಂಪೂರ್ಣ ಲಾಕ್‌ಡೌನ್‌ ಆಗಲಿದೆ. ಇಂದು ಮಧ್ಯರಾತ್ರಿ 12ಗಂಟೆಯಿಂದಲೇ ಯಾರು ಮನೆಯಿಂದ ಹೊರಬರುವಂತಿಲ್ಲ ಎಂದು ಘೋಷಿಸಿದ್ದಾರೆ.

ಕೊರೊನಾ ದಿನೇ ದಿನೇ ತೀವ್ರಗತಿಯಲ್ಲಿ ಹರಡುತ್ತಿದ್ದು, ಮುಂದುವರಿದ ದೇಶಗಳೇ ಇದನ್ನು ತಡೆಯಲು ಸಾಧ್ಯವಾಗದೇ ಹೈರಾಣಾಗಿದ್ದಾರೆ. ಹಾಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಭಾರತಕ್ಕೆ ಈ ಕ್ರಮ ಅನಿವಾರ್ಯವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಮೂರು ವಾರ ಅಂದರೆ ಏಪ್ರಿಲ್‌ 14ರವರೆಗೆ ಇದು ಭಾರತದಾದ್ಯಂತ ಅನ್ವಯವಾಗಲಿದ್ದು ಸಂಪೂರ್ಣ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಇದು ಅನಿವಾರ್ಯ ಎಂದು ಘೋಷಿಸಿದ್ದಾರೆ.

ಇನ್ನು ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಸಂಪೂರ್ಣ ವಿವರಗಳು ಶೀಘ್ರದಲ್ಲಿಯೇ ದೊರಕಲಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights