ಮಹಾರಾಷ್ಟ್ರದಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನ ಸೋಂಕು; ದೇಶದಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕಿತರು

ದೇಶವ್ಯಾಪತಿ ಕಾಡ್ಗಿಚ್ಚಿನಂತೆ ಹರಡುತ್ತಿರುವ ಕೊರೊನಾ ವೈರಸ್ ಎಗ್ಗಿಲ್ಲದೇ ಮನುಷ್ಯನ ದೇಹವನ್ನು ಸೇರುತ್ತಿದೆ. ಈ ಮಹಾಮಾರಿ ಕೊರೊನಾಗೇ ದೇಶದಲ್ಲಿ ಈವರೆಗೆ 2,649 ಜನ ಬಲಿಯಾದರೆ, 81,997 ಜನ ಸೋಂಕಿನಿಂದ ಬಳಲುತ್ತಿದ್ದಾರೆ. ಈವರೆಗೆ 27,969 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಹೌದು…  ಜನರ ನಿದ್ದೆಗೆಡೆಸಿದ ಕೊರೊನಾ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಹೆಚ್ಚು ಬಾಧಿಸುತ್ತಿದೆ. ಇತ್ತ ದೇಶದಲ್ಲಿ ಮಹಾರಾಷ್ಟವನ್ನು ಬೆಂಬಿಡದೇ ಕಾಡುತ್ತಿದೆ. ಕೊರೊನಾ ರೇಸ್ ನಲ್ಲಿ ಮಹಾರಾಷ್ಟ್ರವನ್ನು ಮುನ್ನಡೆಸುತ್ತಿರುವ ವೈರಸ್ ಗೆ ಅತೀ ಹೆಚ್ಚು ಜನ ತುತ್ತಾಗಿದ್ದಾರೆ.

ಈವರೆಗೆ ಮಹಾರಾಷ್ಟ್ರದಲ್ಲಿ 1,019 ಮಂದಿಯನ್ನು ಬಲಿಪಡೆದಿದ್ದು, ಒಟ್ಟು 27,524 ಮಂದಿಗೆ ಈವರೆಗೆ ಸೋಂಕು ತಗುಲಿದೆ. ಸುಮಾರು 6,059 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 8,470 ಮಂದಿ ಕೊರೊನಾ ಸೋಂಕಿತರಿದ್ದು, 115 ಮಂದಿ ಬಲಿಯಾಗಿದ್ದಾರೆ. ಸುಮಾರು 3,045 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ. ತಮಿಳುನಾಡಿನಲ್ಲಿ 9,674 ಮಂದಿಗೆ ಕೊರೊನಾ ತಗುಲಿದ್ದು, 66 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಗುಜರಾತ್‍ನಲ್ಲಿ 9,592 ಮಂದಿ ಸೋಂಕಿಗೆ ತುತ್ತಾಗಿದ್ದು, 586 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಗುಜರಾತ್‍ನಲ್ಲಿ 9,592 ಮಂದಿ ಸೋಂಕಿಗೆ ತುತ್ತಾಗಿದ್ದು, 586 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 9,674 ಮಂದಿಗೆ ಕೊರೊನಾ ತಗುಲಿದ್ದು, 66 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕೇರಳದಲ್ಲಿ 561 ಮಂದಿಯಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದ್ದು, 4 ಸೋಂಕಿತರು ಮೃತಪಟ್ಟಿದ್ದಾರೆ. 493 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಈವರೆಗೆ 987 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 35ಕ್ಕೆ ಏರಿದೆ. ಒಟ್ಟು 460 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ. ಆಂಧ್ರಪ್ರದೇಶದಲ್ಲಿ 2,205 ಮಂದಿಗೆ ಸೋಂಕು ತಗುಲಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ. 1,192 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights