ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ; ವೆಂಟಿಲೇಟರ್ ಚಿಕಿತ್ಸೆ!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪ್ರಣಬ್ ಮುಖರ್ಜಿ ಅವರನ್ನು ದೆಹಲಿಯ ಸೇನಾ ರೆಫರಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರನ್ನು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ಕೃತಕ  ಉಸಿರಾಟ ವ್ಯವಸ್ಥೆ (ವೆಂಟಿಲೇಟರ್‌) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

84 ವರ್ಷದ ಪ್ರಣಬ್ ಮುಖರ್ಜಿಯವರು‌ ಸೋಮವಾರ ಬೆಳಗ್ಗೆ, ತಮಗೆ ಕೊರೊನಾ ಸೋಂಕು ತಗುಲಿರುವುದಾಗಿ ಟ್ವೀಟ್‌ ಮಾಡಿದ್ದರು. ”ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಪರೀಕ್ಷೆ ನಡೆಸಿದಾಗ ಕೊರೋನಾ ಇರುವುದು ದೃಢಪಟ್ಟಿದೆ. ಹೀಗಾಗಿ ಚಿಕಿತ್ಸೆಗೆ ದಾಖಲಾಗಿದ್ದೇನೆ. ಕಳೆದ ಒಂದು ವಾರದಲ್ಲಿ ನನ್ನನ್ನು  ಭೇಟಿಯಾದವರು ಐಸೋಲೇಷನ್‌ಗೆ ತೆರಳುವ ಜತೆಗೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ,”ಎಂದು ಮನವಿ ಮಾಡಿದ್ದರು.


ಇದನ್ನೂ ಓದಿ: BSNL ದೇಶದ್ರೋಹಿಗಳ ಅಡ್ಡ: jio ದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆಯೇ? ಅನಂತ್‌ ಕುಮಾರ್ ವಿರುದ್ಧ ಆಕ್ರೋಶ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights