ಯಡ್ಡಿಯೂರಪ್ಪ ಸರ್ಕಾರದ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್‌ ನಿರ್ಧಾರ!

 ಕೊರೊನಾ ಲಾಕ್‌ಡೌನ್ , ರೈತರ ಸಮಸ್ಯೆಗಳು, ವಲಸೆ ಕಾರ್ಮಿಕರ ಸಂಕಷ್ಟ, ಸರ್ಕಾರದ ಕ್ರಮಗಳು  ಮುಂತಾದ ವಿಚಾರಗಳನ್ನಿಟ್ಟುಕೊಂಡು ಕರ್ನಾಟಕದ ಬಿಜೆಪಿ ಸರ್ಕಾರ ವಿರುದ್ಧ ಹೋರಾಟ ರೂಪಿಸಲು ಕಾಂಗ್ರೆಸ್‌ ಮುಂದಾಗಿದೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರ ಮಹತ್ವದ ಸಭೆ ನಡೆಸಿದ್ದು ಹಲವು ವಿಚಾರಗಖ ಕುರಿತಾಗಿ ಚರ್ಚೆ ನಡೆಸಲಾಗಿದೆ. ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಕಾಂಗ್ರೆಸ್ ನಡೆ ಏನಾಗಿರಬೇಕು, ಸಾರ್ವಜನಿಕವಾಗಿ ಏನೆಲ್ಲಾ ಕಾರ್ಯಕ್ರಮ ರೂಪಿಸಬೇಕು ಎಂಬುವುದರ ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಗಿದೆ. ಈಗಾಗಲೇ ಕಾಂಗ್ರೆಸ್ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದು ಕೊರೊನಾದಿಂದ ಸಂಕಷ್ಟಕ್ಕೆ ಒಳಗಾಗುತ್ತಿರುವ ಜನರ ಪರವಾಗಿ ಕೆಲಸ ಮಾಡುತ್ತಿದೆ.

ಅಲ್ಲದೆ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳು, ರೈತರು, ಕಾರ್ಮಿಕರು, ದಿನಕೂಲಿ ನೌಕರರ ಸಮಸ್ಯೆಗಳಿಗೆ ಸರ್ಕಾರದ ನಿರ್ಲಕ್ಷ ಧೋರಣೆಯ ಬಗ್ಗೆ ಜನರಿಗೆ ಅರಿವು ಮೂಡಿಸುವುದರ ಬಗ್ಗೆ ಚರ್ಚಿಸಲಾಗಿದೆ.

ಈಗಾಗಲೇ ಸರ್ಕಾರಕ್ಕೆ ಒತ್ತಡ ಹೇರುವ ಕೆಲಸವನ್ನು ಕಾಂಗ್ರೆಸ್ ನಡೆಸುತ್ತಿದ್ದು ಇದನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸಲು ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸರ್ಕಾರದ ತಪ್ಪುಗಳನ್ನು ಮುಂದಿಟ್ಟುಕೊಂಡ ಜನರ ಗಮನ ಸೆಳೆಯುವುದು ಹಾಗೂ ಕೈಗೊಳ್ಳಬೇಕಾಗಿರುವ ಕೆಲಸಗಳ ಕುರಿತಾಗಿ ಸರ್ಕಾರದ ಗಮನ ಸೆಳೆಯುವುದು. ಈ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಕಾಂಗ್ರೆಸ್ ನಿರ್ಧಾರ ತೆಗೆದುಕೊಂಡಿದೆ.

ಹಿರಿಯ ಮುಖಂಡರ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ಡಾ. ಜಿ. ಪರಮೇಶ್ವರ್, ಟಿ.ಬಿ. ಜಯಚಂದ್ರ, ರಾಮಲಿಂಗಾರೆಡ್ಡಿ, ಎಸ್.ಆರ್. ಪಾಟೀಲ್, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ್, ಎಚ್.ಎಂ. ರೇವಣ್ಣ, ಯು.ಟಿ. ಖಾದರ್, ಡಿ.ಕೆ. ಸುರೇಶ್, ಸಲೀಂ ಅಹಮದ್, ಚಲುವರಾಯಸ್ವಾಮಿ, ಎಂ. ಕೃಷ್ಣಪ್ಪ, ವಿ.ಎಸ್. ಉಗ್ರಪ್ಪ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಘೋಷಣೆಗಷ್ಟೇ ಸೀಮಿತವಾದ ಟಿಕೆಟ್ ರಹಿತ ಪ್ರಯಾಣ; ಕಾರ್ಮಿಕರಿಂದ ವಸೂಲಿಗಿಳಿದ ಸರ್ಕಾರ

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights