ರಸ್ತೆ ಅಪಘಾತದಲ್ಲಿ ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರರು ಸಾವು…!
ಮಧ್ಯಪ್ರದೇಶದ ಹೋಶಂಗಾಬಾದ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಧ್ಯಾನ್ ಚಂದ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಮಧ್ಯಪ್ರದೇಶದ ಹೋಶಂಗಬಾದ್ ಗೆ ಆಟಗಾರರು ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರ್ ನಜ್ಜುಗುಜ್ಜಾಗಿದೆ. ರಾಷ್ಟ್ರಮಟ್ಟದ ನಾಲ್ವರು ಹಾಕಿ ಆಟಗಾರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.