ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ : ಸಿಎಂ ಯಡಿಯೂರಪ್ಪರಿಂದ ಅದ್ದೂರಿ ಸ್ವಾಗತ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದು, ಸಿಎಂ ಯಡಿಯೂರಪ್ಪ ಅಮಿತ್ ಶಾ ಗೆ ಸ್ವಾಗತ ಕೋರಿದ್ದಾರೆ.
ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮಿಸಿದ್ದು, ಅವರನ್ನು ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿಯ ಪ್ರಮುಖರು ಎದುರುಗೊಂಡು ಸ್ವಾಗತಕೋರಿದ್ದಾರೆ.
ಅಮಿತ್ ಶಾ ಅವರು ಮೊದಲಿಗೆ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಖಾಸಗಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿಂದ ಜಯನಗರಕ್ಕೆ ಬರಲಿದ್ದಾರೆ.
ಜಯನಗರದ ನಾಲ್ಕನೇ ಬ್ಲಾಕ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ ನೂತನ ಕಚೇರಿಯ ಉದ್ಘಾಟನೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದು, ಬಳಿಕ ಹುಬ್ಬಳ್ಳಿಗೆ ತೆರಳಲಿದ್ದಾರೆ.
ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಅಮಿತ್ ಶಾ ಭಾಷಣ ಮಾಡಲಿದ್ದಾರೆ. ಭಾಷಣದ ವೇಳೆ ಸಿಎಎ ಮತ್ತು ಎನ್‌ಆರ್‌ಸಿ ಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ.