ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೇರಿಕೆ : ಕೊಡಗಿನಲ್ಲಿ ಮೊದಲ ಪ್ರಕರಣ ಪತ್ತೆ
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಮೊದಲ ಬಾರಿಗೆ ಕೊಡಗಿನಲ್ಲಿ ಓರ್ವನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಕೆಲದಿನಗಳ ಹಿಂದೆ ಸೌದಿ ಅರೇಬಿಯಾ ಪ್ರವಾಸದಿಂದ ವಾಪಾಸ್ ಆಗಿದ್ದರು. ಇವರಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಆತನನ್ನು ತಪಾಸಣೆಗೆ ಒಳಪಡಿಸಿದಾಗ ಸೋಂಕು ಇರುವುದು ಪತ್ತೆಯಾಗಿದೆ. ಸೋಂಕಿತನನ್ನು ಮಡಿಕೇರಿಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಈತನ ಕುಟುಂಬಸ್ಥರನ್ನು ಚಿಕಿತ್ಸೆಗೆ ಒಳಪಡಿಸುವಲ್ಲಿ ಕಾರ್ಯ ನಡೆದಿದ್ದು, ಕೊಡಗಿನಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ.
ಸೋಂಕಿತ ವ್ಯಕ್ತಿ ಸೌದಿ ಅರೇಬಿಯಾದಿಂದ ಕೊಡಗಿಗೆ ಕೆಲ ದಿನಗಳಿಂದೆ ವಾಪಾಸಾಗಿದ್ದರು. ಇವರಿಗೆ ಸೋಂಕು ತಗಲಿದ್ದು, ಕೊಡಗಿನಲ್ಲಿ ಮೊದಲು ಕೊರೊನಾ ವೈರಸ್ ದಾಖಲಾಗಿದೆ ಎಂದು ಆರೋಗ್ಯ ಸಚಿವ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಕೊರೋನಾ ಶಂಕಿತರನ್ನು ಆಸ್ಪತ್ರೆಯಲ್ಲಿರಿಸಿ ನಿಗಾ ವಹಿಸಲು ಸಾಧ್ಯವಾಗದ ಕಾರಣ ಅವರನ್ನು ಮನೆಯಲ್ಲೇ ಇರಿಸಿ, 14 ದಿನಗಳ ಕಾಲ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಮನೆಯಲ್ಲೇ ಸ್ವನಿರ್ಬಂಧಕ್ಕೆ ಆದೇಶಿಸಲಾಗಿರುವ ಕೊರೋನಾ ಶಂಕಿತರ ಕೈ ಮೇಲೆ ಕ್ವಾರಂಟೈನ್ ಸ್ಟಾಂಪ್ ಹಾಕಲು ಸರ್ಕಾರ ಆದೇಶ ಹೊರಡಿಸಿದೆ.
ಜಗತ್ತಿನಾದ್ಯಂತ ಕೊರೋನಾ ವೈರಸ್ಗೆ ಇದುವರೆಗೂ 8 ಸಾವಿರಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. 2 ಲಕ್ಷಕ್ಕೂ ಅಧಿಕ ಜನರಿಗೆ ಕೊರೋನಾ ಸೋಂಕು ತಗುಲಿದೆ. ಭಾರತದಲ್ಲಿ ಈಗಾಗಲೇ ಮೂವರು ಸಾವನ್ನಪ್ಪಿದ್ದು, ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ.