ರಾಜ್ಯದಲ್ಲಿ ಹೊಸದಾಗಿ 105 ಕೊರೊನಾ ಪಾಸಿಟಿವ್ : ಚಿಕ್ಕಬಳ್ಳಾಪುರದಲ್ಲೇ 45 ಕೇಸ್..!
ರಾಜ್ಯದಲ್ಲಿ ಬೇರೆ ಬೇರೆ ರಾಜ್ಯಗಳಿಂದ ಬಂದವರಲ್ಲಿ ಕೊರೊನಾ ವೈರಸ್ ಹೆಚ್ಚಾಗಿ ಕಂಡುಬರುತ್ತಿದ್ದಿದು, ನದಿಂದ ದಿನಕ್ಕೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿಂದು ಹೊಸದಾಗಿ 105 ಕೊರೊನಾ ಕೇಸ್ ದಾಖಲಾಗಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,710 ಕ್ಕೇರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ನೀಡಿದೆ.
ಹೌದು…. ದಿನ ಕಳೆದಂತೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿನ್ನೆ ಸಂಜೆಯಿಂದ ಇಂದು ಮದ್ಯಾಹ್ನದ ವರದಿಯಲ್ಲಿ 105 ಜನ ಸೋಂಕಿತರು ದಾಖಲಾಗಿದ್ದಾರೆ. ಸಂಜೆ ವೇಳೆ ಈ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇದೆ.
ಇಂದು ಚಿಕ್ಕಬಳ್ಳಾಪುರ 45, ಹಾಸನ 14, ತುಮಕೂರು 8, ಬೀದರ್ 6, ಬೆಂಗಳೂರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ 5, ವಿಜಯಪುರ, ಬೆಂಗಳೂರು ಗ್ರಾಮಾಂತರ 4, ದಾವಣಗೆರೆ, ಹಾವೇರಿ, ಮಂಡ್ಯ ಜಿಲ್ಲೆಯಲ್ಲಿ ತಲಾ 3, ಧಾರವಾಡ 2, ಬಾಗಲಕೋಟೆ, ಚಿತ್ರದುರ್ಗ, ದಕ್ಷಿನ ಕನ್ನಡ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಖ್ಯೆಯಲ್ಲಿ ಇಂದು ಮುಂಚುಣಿಯಲ್ಲಿರುವ ಚಿಕ್ಕಬಳ್ಳಾಪುರಕ್ಕೆ ಮಹಾರಾಷ್ಟ್ರ ಕಂಟಕ ಶುರುವಾಗಿದೆ.
ರಾಜ್ಯದಲ್ಲಿ ಹೊಸದಾಗಿ 105 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,710ಕ್ಕೆ ಏರಿಕೆಯಾಗಿದೆ. ಇವರಲ್ಲಿ 41 ಜನ ಬಲಿಯಾಗಿದ್ದರೆ, 588 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಉಳಿದವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
ಕೋವಿಡ್19: ಮಧ್ಯಾಹ್ನದ ವರದಿ 22/05/2020#KarnatakaFightsCorona #IndiaFightsCoronavirus pic.twitter.com/z4bJiJCjt4
— B Sriramulu (@sriramulubjp) May 22, 2020
ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಮುಂಬೈ, ಮಹಾರಾಷ್ಟ್ರ, ತಮಿಳುನಾಡು, ರಾಯಘಡ, ತೆಲಂಗಾಣ, ರಾಯಘಡ, ಥಾಣೆ, ಜಾರ್ಖಂಡ್, ಅಜ್ಮೀರ್ ನಿಂದ ಆಗಮಿಸಿದ್ದವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.