ರಾಜ್ಯದಲ್ಲಿ 11 ಹೊಸ ಕೊರೊನಾ ಪ್ರಕರಣಗಳು ಪತ್ತೆ : ಸೋಂಕಿತರ ಸಂಖ್ಯೆ 523ಕ್ಕೇರಿಕೆ
ರಾಜ್ಯದಲ್ಲಿ ಲಾಕ್ ಡೌನ್ ನಡುವೆ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣ ಕಾಣುತ್ತಿಲ್ಲ. ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಆದರೂ ರಾಜ್ಯದಲ್ಲಿ ಇಂದು 11 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆಯಾಗಿದೆ.
ಇಂದು ಸಂಜೆ ಮಾಧ್ಯಮ ಪ್ರಕಟಣೆ ಮಾಡಿರುವ ಇಲಾಖೆ, ಒಟ್ಟು ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ. ಹೊಸ 8 ಪ್ರಕರಣಗಳ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, 20 ಜನರ ಚೇತರಿಕೆ ಕಾಣದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನೋರ್ವ ಕೊರೋನಾ ರೋಗಿ ನಿನ್ನೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾನೆ. ಬೆಳಿಗ್ಗೆ ಕರ್ನಾಟಕದಲ್ಲಿ 8 ಜನರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ.ಸಂಜೆ ವೇಳೆಗೆ ಇದರೊಂದರೆ ಪತ್ತೆ 3 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರು-1, ಗದಗ- 1, ಕಲಬುರ್ಗಿ- 6, ಬಾಗಲಕೋಟೆಯಲ್ಲಿ-3 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಕಲಬುರ್ಗಿಯೊಂದರಲ್ಲೇ ಇಂದು 6 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಆತಂಕ ಹೆಚ್ಚಿಸಿದೆ. ಇವರೆಲ್ಲರೂ ಸೋಂಕಿತರ ಸಂಪರ್ಕ ಹೊಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ರಾಜ್ಯದಲ್ಲಿ 198 ಜನರು ಕೊರೋನಾ ರೋಗದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕಲಬುರ್ಗಿಯ ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೋರ್ವ ನಿನ್ನೆ ಸಂಜೆ ಸಾವನ್ನಪ್ಪುವ ಮೂಲಕ ಕೊರೋನಾದಿಂದಾಗಿ ಸತ್ತವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಆತನಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಇನ್ನು ದೇಶದಲ್ಲಿ ಈವರೆಗೆ 29,453 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 6868 ಸೋಂಕಿತರು ಗುಣಮುಖರಾಗಿದ್ದು, 934 ಮಂದಿ ಕಿಲ್ಲರ ಕೊರೊನಾಗೆ ಪ್ರಾಣ ಕಳೆದುಕೊಂಡಿದ್ದಾರೆ.