ಲಾಕ್ ಡೌನ್ ಉಲ್ಲಂಘಿಸಿದವರಿಗೆ ಲೂಸ್ ಮೋಶನ್ ಮಾತ್ರೆ ನೀಡಿ – ಪೊಲೀಸರಿಗೆ ಕುಮಟಳ್ಳಿ ಸಲಹೆ

ಲಾಕ್ ಡೌನ್ ಉಲ್ಲಂಘಿಸಿದವರಿಗೆ ಲೂಸ್ ಮೋಶನ್ ಮಾತ್ರೆ ನೀಡಬೇಕು ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪೊಲೀಸರಿಗೆ ಸಲಹೆ ನೀಡಿದ್ದಾರೆ.

ದಿನ ಕಳೆದಂತೆ ಲಾಕ್ ಡೌನ್ ಜಾರಿಯಿದ್ದರೂ ಜನ ಮನೆ ಬಿಟ್ಟು ಹೊರಬರಲು ಶುರು ಮಾಡಿದ್ದಾರೆ. ಹೀಗಾಗಿ ಕೊರೊನಾ ಸೋಂಕು ಹರಡುವ ಭೀತಿ ಮತ್ತಷ್ಟು ಹೆಚ್ಚಾಗಿದೆ. ಇದರಿಂದಾಗಿ ಜನರ ಜಾಗೃತಿ ಮೂಡಿಸುವಲ್ಲಿ ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಜನ ನಿಯಮ ಉಲ್ಲಂಘಿಸಿ ಮನೆ ಬಿಟ್ಟು ಹೊರಬರುತ್ತಿದ್ದಾರೆ. ಇಂಥವರಿಗೆ ಲಾಠಿ ಚಾರ್ಜ್  ಮಾಡುವ ಬದಲಿಗೆ  ಲೂಸ್ ಮೋಶನ್ ಮಾತ್ರೆ ಕೊಡಿ ಎನ್ನುವ ಸಲಹೆ ಕುಮಟಳ್ಳಿ ನೀಡಿದ್ದಾರೆ.

ಹೌದು… ಅಥಣಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಸ್ಯ ಚಟಾಕೆ ಹಾರಿಸಿದ್ದಾರೆ. ನನಗೆ ಒಂದು ವಾಟ್ಸಾಪ್ ಮೆಸೇಜ್ ಬಂದಿತ್ತು. ಅದರಲ್ಲಿ ಮಹಿಳೆಯೋರ್ವಳು ಹೇಳುತ್ತಿದ್ದಳು, ಪೊಲೀಸರು ಲಾಕ್‍ಡೌನ್ ಉಲ್ಲಂಘಿಸಿದವರನ್ನ ಹಿಡಿದು ಲೂಸ್‍ಮೋಶನ್ ಮಾತ್ರೆ ಕೊಟ್ಟರೆ ಅವರು ಮನೆಯಲ್ಲೂ ಇರುತ್ತಾರೆ. ಮತ್ತೆ ದಿನನಿತ್ಯ ಕೈಗಳನ್ನ ತೊಳೆದುಕೊಳ್ಳುತ್ತಾರೆ ಎಂಬುದಾಗಿತ್ತು ಎಂದು ಶಾಸಕರು ಹೇಳಿದ್ದಾರೆ.

ಇಂಥಹ ಐಡಿಯಾವನ್ನು ಪೊಲೀಸರು ಅದೆಷ್ಟು ಪಾಲಿಸುತ್ತಾರೋ ಕಾದು ನೋಡಬೇಕಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights