ವಲಸೆ ಕಾರ್ಮಿಕರಿಗೆ 3 ದಿನ ಉಚಿತ ಬಸ್ ಸೇವೆ ಇನ್ನೆರೆಡು ದಿನಕ್ಕೆ ವಿಸ್ತರಣೆ….

ವಲಸೆ ಕಾರ್ಮಿಕರಿಂದ ಕೆಎಸ್‌ಆರ್‌ಟಿಸಿಯಲ್ಲಿ ದುಪ್ಪಟ್ಟು ಹಣ ಪಡೆಯುತ್ತಿದ್ದ ಆರೋಪದ ಬೆನ್ನಲ್ಲೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ 3 ದಿನಗಳವರೆಗೆ ಉಚಿತ ಪ್ರಯಾಣಕ್ಕೆ ಸೂಚಿಸಿತ್ತು. ಸದ್ಯ ಈ ಅವಧಿಯನ್ನು  ಇನ್ನೆರೆಡು ದಿನಗಳವರೆಗೆ ವಿಸ್ತರಿಸಿದೆ.

ಹೌದು… ರಾಜ್ಯ ಸರ್ಕಾರ ಮೂರು ದಿನಗಳ ಕಾಲ ವಲಸೆ ಕಾರ್ಮಿಕರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿತ್ತು. ಸದ್ಯ ಈ ಅವಧಿಯನ್ನು ಇನ್ನೆರೆಡು ದಿನಗಳವರೆಗೆ ಅಂದರೆ ಒಟ್ಟು 5 ದಿನಗಳವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಈ ಬಗ್ಗೆ ಮಾತನಾಡಿದ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಎಂ ಕಳಸದ್ ಅವರು, ಭಾನುವಾರದಿಂದ ಮಂಗಳವಾರದವರೆಗೆ ಉಚಿತವಾಗಿ ತೆರಳಲು ಮೂರು ದಿನಗಳ ಕಾಲ ಅವಕಾಶ ಕೊಡಲಾಗಿತ್ತು. ಈಗ ಮತ್ತೆ ಎರಡು ದಿನ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಗುರುವಾರದವರೆಗೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಕಾರ್ಮಿಕರು ಉಚಿತವಾಗಿ ಸಂಚಾರ ಮಾಡಬಹುದು ಎಂದು ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು, ಅದನ್ನು ಇನ್ನೂ ಎರಡು ದಿನಗಳ ಕಾಲ ವಿಸ್ತರಿಸಲಾಗಿದೆ. ಮಂಗಳವಾರ ಈ ಸೌಲಭ್ಯ ಕೊನೆಗೊಳ್ಳುತ್ತಿತ್ತು. ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಕಾರ್ಮಿಕರು ಮತ್ತು ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights